ಜಲಾಮೃತ ಮತ್ತು ಸ್ವಚ್ಚ ಮೇವ ಜಯತೆ ಆಂದೋಲನಕ್ಕೆ ಚಾಲನೆ ನೀಡಿದ ಸಿಇಓ

ಹಾವೇರಿ :

      ಇಲ್ಲಿನ ತಾಲೂಕ ಪಂಚಾಯತಿ ಆವರಣದಲ್ಲಿ ಜಲಾಮೃತ ಮತ್ತು ಸ್ವಚ್ಚ ಮೇವ ಜಯತೆ ಆಂದೋಲನದ ನಿಮಿತ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಕೆ ಲೀಲಾವತಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಛೇರಿ ಆವರಣದಲ್ಲಿ ಸರ್ಕಾರಿ ಅಧಿಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಅವರು ಪರಿಸರ ಉಳಿವಿಕೆಗೆ ಎಲ್ಲರೂ ಬದ್ಧರಾಗಬೇಕು.

     ತಮ್ಮ ವ್ಯಾಪ್ತಿಯ ಎಲ್ಲ ಗ್ರಾ.ಪಂಗಳಲ್ಲಿ ಸಸಿ ನೆಡುವ ಕೆಲಸಕ್ಕೆ ಪ್ರೇರಣೆ ನೀಡುವಂತಾಗಬೇಕು ಎಂದು ಸಿಇಓ ತಿಳಿಸಿದರು. ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ.ತಾ.ಪಂ ಅಧ್ಯಕ್ಷ ಕರಿಯಪ್ಪ ಉಂಡಿ. ಯೋಜನಾಧಿಕಾರಿಗಳಾದ ಕುಮಾರ ಮಣ್ಣವಡ್ಡರ.ಸಹಾಯಕ ನಿರ್ದೇಶಕರಾದ ಟಿ.ಆರ್ ಮಲ್ಲಾಡದ.ಮಾಹಿತಿ ಶಿಕ್ಷಣ ಸಂವಹನ ಅಧಿಕಾರಿ ಗಿರೀಶ ಬೆನ್ನೂರ. ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಪುಷ್ಪಾ ಬಿದರಿ ಸೇರಿದಂತೆ ತಾಪಂ ಕಾರ್ಯ ವೃಂದದವರು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link