ಫೆ.17 ರಿಂದ ಈಶಾನ್ಯ ರಾಜ್ಯಗಳ ಜಾನಪದ ಉತ್ಸವ

ಹುಳಿಯಾರು

       ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವೂರು ಹಾಗೂ ಶ್ರೀ ಮಾತಾ ಚಾರಿಟಬಲ್ ಟ್ರಸ್ಟ್ ಹುಳಿಯಾರು ಇವರ ಸಹಯೋಗದಲ್ಲಿ ಈಶಾನ್ಯ ರಾಜ್ಯಗಳ ಜಾನಪದ ಮಾಗಿ ಉತ್ಸವವನ್ನು ಇದೇ ತಿಂಗಳ 17 ರಿಂದ 19 ರವರೆಗೆ ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಆರು ಗಂಟೆಯಿಂದ ಹುಳಿಯಾರಿನ ಕೋಡಿಪಾಳ್ಯದ ಧ್ಯಾನ ನಗರಿಯಲ್ಲಿರುವ ಶ್ರೀ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವೂರು ಸದಸ್ಯರಾದ ನಂಜುಂಡಸ್ವಾಮಿ ತೊಟ್ಟವಾಡಿ ತಿಳಿಸಿದರು.

         ಹುಳಿಯಾರಿನ ಧ್ಯಾನ ನಗರಿಯಲ್ಲಿರುವ ಅನಂತಪದ್ಮನಾಭ ಮಂದಿರದಲ್ಲಿ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಹುಳಿಯಾರಿನ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಮೂರು ದಿನಗಳ ಕಾಲ ಪ್ರತಿದಿನ ಸಂಜೆ 6 ಗಂಟೆಯಿಂದ ವಿವಿಧ ರಾಜ್ಯಗಳಿಂದ ಆಗಮಿಸಿರುವ ಸುಮಾರು ನೂರೈವತ್ತಕ್ಕೂ ಹೆಚ್ಚು ಕಲಾವಿದರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಎಲ್ಲರೂ ಸೇರಿ ಒಗ್ಗಟ್ಟಿನಿಂದ ನಿಭಾಯಿಸೋಣ ಎಂದ ಅವರು ಕಾರ್ಯಕ್ರಮಕ್ಕೆ ಯಾವುದೇ ಕುಂದು ಕೊರತೆ ಬಾರದಂತೆ ಯಶಸ್ವಿಯಾಗಿ ನಡೆಸಲು ಸಹಕರಿಸುವಂತೆ ಕೋರಿದರು.

        ಫೆ .17 ರ ಭಾನುವಾರ ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ನೆರವೇರಲಿದ್ದು ಅರಸೀಕೆರೆ ಮಾಡಾಳು ನಿರಂಜನ ಪೀಠದ ಪೀಠಾಧ್ಯಕ್ಷರಾದ ಶ್ರೀ ರುದ್ರಮುನಿ ಮಹಾಸ್ವಾಮಿಗಳವರು ಸಾನ್ನಿಧ್ಯ ವಹಿಸಲಿದ್ದಾರೆ. ಪತ್ರಕರ್ತರಾದ ಮಂಜುನಾಥ್ ಅದ್ದೆ, ಬಿ.ಎನ್.ರಮೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

         ಫೆ.19ರ ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನೆರವೇರಲಿದ್ದು ಕುಪ್ಪೂರು ಗದ್ದಿಗೆ ಮಠದ ಪೀಠಾಧ್ಯಕ್ಷರಾದ ಡಾ.ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಹಾಗೂ ಹಿರಿಯ ಪತ್ರಕರ್ತ ಶಿವಾಜಿ ಗಣೇಶನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

         ಮೂರು ದಿನಗಳ ಕಾಲ ಪ್ರತಿದಿನ ಸಂಜೆ 6 ಗಂಟೆಯಿಂದ ಈಶಾನ್ಯ ರಾಜ್ಯಗಳಾದ ಮಿಜೋರಾಂ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಅಸ್ಸಾಂ, ತ್ರಿಪುರ, ಸಿಕ್ಕಿಂ, ಮೇಘಾಲಯ ರಾಜ್ಯಗಳಿಂದ ಆಗಮಿಸಿರುವ ಸುಮಾರು ನೂರೈವತ್ತಕ್ಕೂ ಹೆಚ್ಚು ಕಲಾವಿದರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

         ಈ ಸಂದರ್ಭದಲ್ಲಿ ಮಾತಾ ಚಾರಿಟಬಲ್ ಟ್ರಸ್ಟ್ ವ್ಯವಸ್ಥಾಪಕ ಧರ್ಮದರ್ಶಿಗಳಾದ ಗಂಗಾಧರ್, ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್, ನಂದಿಹಳ್ಳಿ ಶಿವಣ್ಣ, ಹಾಡ್ರ್ವೇರ್ ಸಂಘದ ಅಧ್ಯಕ್ಷ ಬಸವರಾಜು, ಜಲಾಲ್ ಸಾಬ್, ಭವಾನಿರಮೇಶಣ್ಣ, ಪ್ರಸನ್ನ ಕುಮಾರ್, ಕನಕ ಬ್ಯಾಂಕ್ ದೇವಿಪ್ರಸಾದ್, ಕೆ.ಎನ್.ಉಮೇಶ್, ಕರವೇ ಸದಸ್ಯ ಚನ್ನಬಸವಯ್ಯ ಮೊದಲಾದವರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link