ಜನರ ನಿರೀಕ್ಷೆಯಂತೆ ಅಭಿವೃದ್ದಿ ಕೆಲಸ ಮಾಡಿ

ಚಿತ್ರದುರ್ಗ

    ಮತದಾರರು ನಿಮ್ಮ ಮೇಲೆ ನಂಬಿಕೆಯಿಟ್ಟು ಆಯ್ಕೆ ಮಾಡಿದ್ದು, ನೂತನ ಸದಸ್ಯರುಗಳು ರಾಜಕೀಯ ಬಿಟ್ಟು ಎಲ್ಲಾ ಜನರೊಂದಿಗೆ ಬೆರೆತು ಅವರ ನಿರೀಕ್ಷೆಯಂತೆ ಕೆಲಸ ಮಾಡಬೇಕು ಎಂದು ಬಿಜೆಪಿ ಯುವ ಮುಖಂಡ ರಘುಚಂದನ್ ಸಲಹೆ ನೀಡಿದ್ದಾರೆ

     ಹೊಳಲ್ಕೆರೆ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 14 ಮತ್ತು 16ನೇ ವಾರ್ಡಿನ ಸದಸ್ಯರು ಫಲಿತಾಂಶ ಹೊರ ಬಿದ್ದ ಕೂಡಲೇ ಚಿತ್ರದುರ್ಗದ ರಘುಚಂದನ್ ಅವರ ಕಚೇರಿಗೆ ಬೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ಎಲ್ಲರಿಗೂ ಅಭಿನಂದಿಸಿ ಅವರು ಮಾತನಾಡಿದರು

       ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಜನರು ಆಶಿರ್ವಾದ ಮಾಡಿದ್ದಾರೆ. ಸದಸ್ಯರು ಜನರು ಇಟ್ಟುಕೊಂಡಿರವ ನಂಬಿಕೆಯನ್ನು ಹುಸಿ ಮಾಡದೆ ಕೆಲಸ ಮಾಡಬೇಕು. ಕುಡಿಯುವ ನೀರು, ಬೀದಿ ದೀಪಗಳ ನಿರ್ವಹಣೆ, ರಸ್ತೆ ,ಚರಂಡಿಗಳ ವ್ಯವಸ್ಥೆಯೂ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತು ಕೊಡುವಂತೆಯೂ ಇದೇ ಸಂದರ್ಭದಲ್ಲಿ ಹೇಳಿದರು

ಪಟ್ಟಣದ ಅಭಿವೃದ್ದಿಗೆ ಶ್ರಮಿಸುವೆ

        ಈ ಸಂದರ್ಭದಲ್ಲಿ ಮಾತನಾಡಿದ 8ನೇ ವಾರ್ಡಿನಿಂದ ಅತೀ ಹೆಚ್ಚು ಬಹುಮತಗಳಿಂದ ಆಯ್ಕೆಯಾಗಿರುವ ಆಶೋಕ್, ಹೊಳಲ್ಕೆರೆ ಪಟ್ಟಣವೂ ಸೇರಿದಂತೆ ತಾಲ್ಲೂಕಿನಲ್ಲಿ ಶಾಸಕರು ಮಾಡಿರುವ ಅಭಿವೃದ್ದಿ ಕೆಲಸಗಳನ್ನು ನೋಡಿ ಜನರು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಚುನಾವಣೆಯ ವೇಳೆ ನೀಡಿರುವ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನುಡಿದರು

       ಇಡೀ ದೇಶದಲ್ಲಿಯೇ ಇಂದು ಮೋದಿಯ ನಾಯಕತ್ವಕ್ಕೆ ಜನರು ಒಪ್ಪಿಕೊಂಡಿದ್ದಾರೆ. ಮೋದಿ ಅವರ ಅಲೆ, ಶಾಸಕರ ಪ್ರಭಾವ ಮತ್ತು ಪಕ್ಷದ ಕಾರ್ಯಕರ್ತರ ಪರಿಶ್ರಮವೂ ನನ್ನ ಗೆಲುವಿಗೆ ಮುಖ್ಯ ಕಾರಣವೆಂದು ತಿಳಿಸಿದರು

        14ನೇ ವಾರ್ಡಿನ ನೂತನ ಸದಸ್ಯೆ ಸುಧಾ ಬಸವರಾಜ್ ಮಾತನಾಡಿ, ನನ್ನ ಅವಧಿಯಲ್ಲಿ ಪಟ್ಟಣದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಕುಡಿಯುವ ನೀರು, ರಸ್ತೆ ಮುಂದಾದ ಸೌಲಬ್ಯಗಳನ್ನು ಮತದಾರರಿಗೆ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು

      ಹೊಳಲ್ಕೆರೆ ಪಟ್ಟಣದಲ್ಲಿ ಶಾಸಕ ಎಂ.ಚಂದ್ರಪ್ಪ ಅವರು ತಮ್ಮ ಎರಡು ಅವಧಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪಟ್ಟಣದಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣ, ಬಸ್ ನಿಲ್ದಾಣ, ವಾಣಿಜ್ಯ ಮಗಳಿಗೆಗಳು ಇನ್ನೂ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ. ಈ ಕಾರಣದಿಂದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಎಂದು ಹೇಳಿದರು

       ಪಟ್ಟಣವೂ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಚಂದ್ರಪ್ಪ ಅವರಿಂದಲೇ ರಸ್ತೆಗಳು ಸುಧಾರಣೆಯಾಗಿವೆ. ಬಹುತೇಕ ಗ್ರಾಮಗಳಿಗೆ ಇಂದು ಉತ್ತಮ ರಸ್ತೆ ಸಂಪರ್ಕವಿದೆ. ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕಷ್ಟು ಕೊಡುಗೆ ನೀಡಲಿದ್ದಾರೆ ಎಂದು ಸುಧಾ ಬಸವರಾಜ್ ಹೇಳಿದರುಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ್, ಮಹೇಶ್, ಗೋಪಾಲಸ್ವಾಮಿ ನಾಯಕ್, ಸಿದ್ದರಾಮ, ಶಿವು, ರಾಘವೇಂದ್ರ, ಅಜೇಯ್ , ಮನು ಇನ್ನಿತರರು ಹಾಜರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link