ಕುಣಿಗಲ್
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಜನ ಮನ್ನಣೆ ನೀಡದೆ ಬಿಜೆಪಿಯವರ ಪರ ವಾಲಿರುವುದು,ಜನರು ಆತ್ಮಾವಲೋಕನಾ ಮಾಡಿಕೊಳ್ಳಬೇಕಾಗಿದೆ ಎಂದು ಬೆಂ.ಗ್ರಾ.ನೂತನ ಸಂಸತ್ ಸದಸ್ಯರಾದ ಡಿ.ಕೆ.ಸುರೇಶ್ ತಿಳಿಸಿದರು.
ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ,ಬೆಂ.ಗ್ರಾ.ಕ್ಷೇತ್ರವೂ ಮೂರು ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟಿದ್ದು,ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ಬೆಂಬಲದಿಂದ ಜನರ ಒಡನಾಡಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ರೈತರು,ಕಾರ್ಮಿಕರು,ಬಡವರು ಗೆಲ್ಲಿಸಿದಕ್ಕೆ ಅಭಿನಂದನೆ ಸಲ್ಲಿಸಿದರು.
ಕಳೆದ 5 ವರ್ಷಗಳಿಂದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಿದ ಕಾರ್ಯಕರ್ತರು,ಮಾಧ್ಯಮದವರು,ಅಧಿಕಾರಿ ವರ್ಗದವರಿಗೆ ಕೃತಜ್ಞತೆ ಸಲ್ಲಿಸಿ,ದೇಶದಲ್ಲಿ ಕಾಂಗ್ರೆಸ್ ಪಕ್ಷವೂ ನಿರೀಕ್ಷಿತ ಮಟ್ಟದಲ್ಲಿ ಜನರು ಕೈ ಹಿಡಿಯಲಿಲ್ಲ,ಬಿಜೆಪಿ ಪಕ್ಷದ ನರೇಂದ್ರ ಮೋದಿಯವರು ದೇಶದಲ್ಲಿ ಎಂದೂ ಅಭಿವೃದ್ಧಿ ವಿಚಾರವನ್ನ ಮಾತನಾಡದೇ ಇದ್ದರೂ, ಜನರು ಅವರನ್ನ ಕೈಹಿಡಿದಿದ್ದಾರೆ.
ಕಾಂಗ್ರೆಸ್ ಪಕ್ಷವೂ ಎಲ್ಲಾ ಜಾತಿ ವರ್ಗದ ಪರವಾಗಿ ಇಲ್ಲಿಯವರೆಗೂ ಅಭಿವೃದ್ದಿ ಕಾರ್ಯವನ್ನ ಕೈಗೊಂಡಿದೆ ಎಂದು ತಿಳಿಸುತ್ತಾ,ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ.ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಶಾಸಕ ಡಾ.ರಂಗನಾಥ್, ಕಾಂಗ್ರೆಸ್ ಮುಖಂಡರಾದ ಕೆಂಪೀರೇಗೌಡ, ಅನಿಲ್, ಮಮ್ತಾಜ್ ಅಹಮದ್, ರಂಗಣ್ಣಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ







