ದಾವಣಗೆರೆ
ಜನಸಂಖ್ಯಾ ಸ್ಥಿರತೆ ಮತ್ತು ನಿಯಂತ್ರಣದ ಬಗ್ಗೆ ಏರ್ಪಡಿಸಲಾಗಿದ್ದ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶೈಲಜಾ ಬಸವರಾಜ್ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ತಾಲೂಕು ಪಂಚಾಯಿತಿ, ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಿಂದ ಏರ್ಪಡಿಸಲಾಗಿದ್ದ ಜನಸಂಖ್ಯಾ ಸ್ಥಿರತೆ ಮತ್ತು ನಿಯಂತ್ರಣದ ಬಗ್ಗೆ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.
ಒಂದು ಎರಡು ಆಸ್ತಿ ಮಿಕ್ಕಿದ್ದೆಲ್ಲಾ ಜಾಸ್ತಿ, ಮಿತ ಸಂಸಾರ ಹಿತ ಸಂಸಾರ, ಚಿಕ್ಕ ಕುಟುಂಬ ಸುಖೀ ಕುಟುಂಬ, ಹೆಣ್ಣಿರಲಿ ಗಂಡಿರಲಿ ಒಂದೇ ಇರಲಿ, ಬಾಳೆಗೆ ಒಂದೇ ಗೊನೆ ಕುಟುಂಬಕ್ಕೆ ಒಂದೇ ಮಗು ಕೊನೆ, ಜನಸಂಖ್ಯೆ ನಿಯಂತ್ರಿಸಿ ದೇಶದ ಅಭಿವೃದ್ಧಿಗೆ ಸಹಕರಿಸಿ, ಜನಸಂಖ್ಯಾ ನಿಯಂತ್ರಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ, ಚಿಕ್ಕ ಕುಟುಂಬ ಚೊಕ್ಕ ಕುಟುಂಬ…ಎಂಬ ಘೋಷಣೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಜಾಥಾದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಹೆಚ್. ಬಸವರಾಜೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತ್ರಿಪುಲಾಂಭ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿದ್ದೇಶಿ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಶಿವಕುಮಾರ್. ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಮಿನಾಕ್ಷಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಂಗಾಧರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ತು.ಕ ಶಂಕರಯ್ಯ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
