ಬಳ್ಳಾರಿ
ಜನಸಂಖ್ಯೆ ಹೆಚ್ಚಳದಿಂದ ದೇಶದ ಆರ್ಥಿಕ, ಸಾಮಾಜಿಕ ಅಭಿವೃದ್ದಿಯಲ್ಲಿ ಅನೇಕ ತೊಂದರೆಗಳು ಉಂಟಾಗುತ್ತಿದ್ದು, ಈ ನಿಟ್ಟಿನಲ್ಲಿ ಜನಸಂಖ್ಯಾ ಸ್ಪೋಟ ನಿಯಂತ್ರಣಕ್ಕೆ ಅರಿವು ಮೂಡಿಸುವುದು ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಅರ್ಜುನ್ ಎಸ್.ಮಲ್ಲೂರ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಜನಸಂಖ್ಯಾ ಸ್ಪೋಟದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜನಸಂಖ್ಯೆ ಹೆಚ್ಚಳದಿಂದ ಈ ದೇಶದಲ್ಲಿರುವ ಎಲ್ಲಾ ನಾಗರಕರಿಗೂ ಸಮಾನ ರೀತಿಯಲ್ಲಿ ನೋಡಬೇಕಾಗುತ್ತದೆ. ಅವರಿಗೆ ಮನೆ, ಶಿಕ್ಷಣ, ಆರೋಗ್ಯ ನೀಡಬೇಕಾಗುತ್ತದೆ. ಜನಸಂಖ್ಯಾ ಹೆಚ್ಚಳದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಹೆಚ್ಚೆಚ್ಚು ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು.
ಜನಸಂಖ್ಯೆ ನಿಯಂತ್ರಣಕ್ಕೆ ಸರಕಾರಗಳು ಮಾತ್ರ ಸಾಧ್ಯ ಅಲ್ಲ, ನಾಗರೀಕರ ಪಾಲು ಇದೆ. ಗಂಡಸಿನ ಮನೋಭಾವನೆ ಬದಲಾವಣೆ ಆಗಬೇಕು. ಒಂದೇ ಕುಟುಂಬದಲ್ಲಿ 6 ಕ್ಕೂ ಹೆಚ್ಚು ಇರುವ ಮಕ್ಕಳಿಗೆ ಅವರ ಪೋಷಣೆಗೆ ತೊಂದರೆ ಉಂಟಾಗಿ ಮಕ್ಕಳು ಸಮಾಜ ಮುಖ್ಯವಾಹಿನಿಗೆ ಬಾರದೇ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದ ಅವರು ದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿದೆ ಇದರಿಂದಾಗಿ ಸಂಪನ್ಮೂಲ ಕೊರತೆ, ಭೌಗೋಳಿಕ ಕೊರತೆ ಕಾಣಬಹುದು.
ಕೆಲ ದಿನಗಳ ಹಿಂದೆ ಚೈನ್ನೈನಲ್ಲಿ ನೀರಿಲ್ಲದೇ ನಾಗರಕರು ಪರದಾಡುತ್ತಿರುವುದು ಕಾಣಬಹುದು. ಇದಕ್ಕೆ ಮುಖ್ಯಕಾರಣ ನೈಸರ್ಗಿಕ ನಾಶ, ಅತೀಯಾದ ಜನಸಂಖ್ಯೆ ಸಹ ಮುಖ್ಯ ಕಾರಣವಾಗಿದೆ ಎಂದರು. ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಬಸರೆಡ್ಡಿ ಅವರು ಮಾತನಾಡಿ, ಇತರೆ ಪಶ್ಚಿಮ ರಾಷ್ಟ್ರಗಳಲ್ಲಿ ಹೋಲಿಸಿದರೆ ಭಾರತದೇಶದಲ್ಲಿ ಮಾತ್ರ ಜನಸಂಖ್ಯೆ ಅತಿಯಾಗಿ ಹೆಚ್ಚುತ್ತಿದೆ. ಇದನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.
ಜನಸಂಖ್ಯೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಅಡಿ ಪುರುಷ ಮತ್ತು ಮಹಿಳೆರಿಯಗೆ ಶಾಶ್ವತ ಶಸ್ತ್ರಚಿಕಿತ್ಸಾ ವಿಧಾನಗಳು ಇದ್ದು ಮಹಿಳೆಯರಿಗೆ ಲ್ಯಾಪ್ರೊಸ್ಕೋಪಿಕ್ ಮತ್ತು ಟ್ಯುಬೆಕ್ಟಮಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವರಾಜ್ ಹೆಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅನುಷ್ಟಾನಾಧಿಕಾರಿ ಡಾ.ಅನಿಲ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ಅವರು ಸ್ವಾಗತಿಸಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಡಾ.ಕೆ.ಜಿ.ವೀರೇಂದ್ರಕುಮಾರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ.ಇಂದ್ರಾಣಿ, ಎನ್.ಎಸ್.ಎಸ್. ಅಧಿಕಾರಿ ಕುಮಾರಸ್ವಾಮಿ ಡಿ.ಕ್ಯೂ.ಎಮ್ ಡಾ.ಲಕ್ಷ್ಮಿಕಾಂತ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯ್ಕ, ಸಹಾಯಕ ಆಡಳಿತಾಧಿಕಾರಿ ಮೆಹಬೂಬ್ ಖಾನ್, ಹಿ.ಆ.ಸ ಬಂಡೆಪ್ಪ, ಎ.ಎಸ್.ಒ ಗುರುಪ್ರಸಾದ್ ಶಾಂತವ್ವ ಉಪ್ಪಾರ, ತಂಗಮ್ಮ, ಮಲ್ಲಪ್ಪ ಕೆ, ಸೇರಿದಂತೆ ನಗರ ಆರೋಗ್ಯ ಸಿಬ್ಬಂದಿ ಆಶಾ ಕಾರ್ಯಕರ್ತೆಯರು, ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.