ಹಿರೇಕೆರೂರ :
ತಾಲೂಕು ಆಡಳಿತ ಹಿರೇಕೆರೂರ ಇವರ ಸಂಯುಕ್ತ ಆಶ್ರಯದಲ್ಲಿ ಶಾಸಕರಾದ ಬಿಸಿ ಪಾಟೀಲ ಇವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಮಂಜೂರಾದ ವಿಧವಾ ವೇತನದ ಆದೇಶ ಕಾಫಿ, ಮತ್ತು ಕೋಡ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನಕ್ಕೆ 5 ಲಕ್ಷ ರೂಪಾಯಿಗಳ ಚೆಕ್ ನ್ನು ವಿತರಿಸಿದರು. ಹಾಗೂ ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಶಾಸಕ ಬಿಸಿ ಪಾಟೀಲ, ತಾಲೂಕು ಪಂಚಾಯತ್ ಅಧ್ಯಕ್ಷರು ಚಿಕ್ಕೇರೂರು ಗ್ರಾಮ ಪಂಚಾಯತ ಪದಾಧಿಕಾರಿಗಳು ಹಾಗೂ ಪಟ್ಟಣ ಪಂಚಾಯತ್ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಊರ ನಾಗರಿಕರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
