ಹುಲ್ಲತ್ತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳಿಂದ ಜನಸ್ಪಂದನ ಸಭೆ

ಹಾವೇರಿ

      ಹಳ್ಳಿಗಳ ಜನರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಜಿಲ್ಲಾಡಳಿತವೇ ಇಂದು ನಿಮ್ಮ ಮನೆ ಬಾಗಿಲಿಗೆ ಬಂದಿದೆ. ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತ ಸದಾಸಿದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಹೇಳಿದರು.ನೂತನ ರಟ್ಟೀಹಳ್ಳಿ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಜರುಗಿದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಪ್ರಜಾಪ್ರಭುತ್ವದಲ್ಲಿ ಆಡಳಿತ ವ್ಯವಸ್ಥೆ ಸಂವೇಧನಾಶೀಲತೆಯಿಂದ ಕೂಡಿರಬೇಕು. ಜನರ ಬೇಕು ಬೇಡಗಳನ್ನು ಅರಿತು ಅವರ ಸಮಸ್ಯೆಗಳಿಗೆ ದೂರು ದುಮ್ಮಾನಗಳನ್ನು ಕುಲಂಕೂಷವಾಗಿ ಪರಿಶೀಲಿಸಿ ಸ್ಥಳದಲ್ಲೇ ಪರಿಹರಿಸಬಹುದಾದ ಸಮಸ್ಯೆಗಳಿಗೆ ತಕ್ಷಣದಲ್ಲೇ ಪರಿಹಾರ ನೀಡಲಾಗುವುದು ಇನ್ನೂ ಕೆಲವು ಸಮಸ್ಯೆಗಳಿಗೆ ಹಂತಹಂತವಾಗಿ ಪರಿಹಾರ ಒದಗಿಸಲಾಗುವು ಎಂದು ತಿಳಿಸಿದರು.

     ಸಾರ್ವಜನಿಕರು, ರೈತರು, ವಿದ್ಯಾರ್ಥಿಗಳು ಕೆಲಸ ನಿಮಿತ್ತ ತಾಲೂಕಾ ಮತ್ತು ಜಿಲ್ಲಾ ಮಟ್ಟದ ಕಚೇರಿಗೆ ತೆರಳಿದ ಸಂದರ್ಭದಲ್ಲಿ ಅಧಿಕಾರಿಗಳು ಸಭೆ-ಸಮಾರಂಭದ ನಿಮಿತ್ತ ಇತರೆಡೆ ತೆರಳಿದ ಕಾರಣ ತಮಗೆ ಅಧಿಕಾರಿಗಳನ್ನು ಭೇಟಿ ಮಾಡಲು ಆಗುವುದಿಲ್ಲ ಹಾಗೂ ಮಾಹಿತಿಗಳು ಸಿಗುವುದು ಕಷ್ಟವಾಗುತ್ತಿದೆ.

     ಹಾಗಾಗಿ ಕೃಷಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಎಲ್ಲ ಅಧಿಕಾರಿಗಳು ನಿಮ್ಮ ಬಳಿಗೆ ಬಂದು ಇಲಾಖೆಗಳ ಸೌಲಭ್ಯಗಳ ಮಾಹಿತಿ ನೀಡಿದ್ದಾರೆ. ಈ ಕುರಿತು ತಮಗೇನಾದರೂ ಗೊಂದಲಗಳಿದ್ದರೆ ಸ್ಥಳದಲ್ಲೇ ಕೇಳಿ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.

     ಜನಸ್ಪಂದನ ಸಭೆಯ ಪೂವದಲ್ಲಿ ಅಧಿಕಾರಿಗಳಿಂದ ನಿಮ್ಮ ಸಮಸ್ಯೆಗಳ ಮಾಹಿತಿ ಪಡೆಯಲಾಗಿದೆ. ಪೋಡಿ ಖಾತೆ ಕುರಿತು ಹೆಚ್ಚಾಗಿ ದೂರುಗಳು ಬಂದಿವೆ. ಈ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ಹುಲ್ಲತ್ತಿ ಗ್ರಾಮವನ್ನು ಪೋಡಿಮುಕ್ತಗ್ರಾಮವೆಂದು ಘೋಷಿಸಲಾಗುವುದೆಂದು ಹೇಳಿದರು.

     ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿದರಿ, ಉಪವಿಭಾಗಧಿಕಾರಿ ತಿಪ್ಪೇಸ್ವಾಮಿ, ರಟ್ಟಿಹಳ್ಳಿ ತಹಶೀಲ್ದಾರ ಪ್ರಸನ್ನಕುಮಾರ, ಹಿರೇಕೆರೂರು ತಹಶೀಲ್ದಾರ ಅಶೋಕ ಶಿಗ್ಗಾಂವ, ಜಿಲ್ಲಾ ಪಂಚಾಯತಿ ಸಹಕಾರ್ಯದರ್ಶಿ ಜಾಫರ ಸುತಾರ, ಜಂಟಿ ಕೃಷಿ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಪ್ಪ ಭೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಘವೇಂದ್ರಸ್ವಾಮಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸುರೇಶ ರೆಡ್ಡಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನಮಠದ, ಪಶು ಸಂಗೋಪನಾ ಇಲಾಖೆಯ ಅಧಿಕಾರಿ ಡಾ.ರಾಜೀವ ಕೂಲೇರ, ರೈತ ಮುಖಂಡ ಹನುಮಂತಪ್ಪ, ಗ್ರಾ.ಪಂ.ಸದಸ್ಯರು ಇತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link