ಬೆಂಗಳೂರು
ಮೈತ್ರಿ ಸರ್ಕಾರದ ಎರಡನೇ ಸಚಿವ ಸಂಪುಟ ವಿಸ್ತರಣೆ ಶನಿವಾರ ರಾಜಭವನದಲ್ಲಿ ನಡೆದಿದೆ. ಆದರೆ ಮೈತ್ರಿ ಪಕ್ಷ ಜೆಡಿಎಸ್ ಸಚಿವ ಸಂಪುಟ ವಿಸ್ತರಣೆಗೆ ಹಿಂದೇಟು ಹಾಕಿದೆ.
ಖಾಲಿ ಇರುವ ಎರಡು ಸ್ಥಾನವನ್ನು ಭರ್ತಿ ಮಾಡಲು ಜೆಡಿಎಸ್ ವರಿಷ್ಠರು ಮೀನಾ ಮೇಷ ಎಣಿಸುತ್ತಿದ್ದು, ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾದ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಅಸಮಾಧನವನ್ನು ತಡೆಯಲು ಜೆಡಿಎಸ್ ವರಿಷ್ಟರು ಈ ತಂತ್ರವನ್ನು ಅನುಸರಿಸುತ್ತಿದ್ದಾರೆಂಬ ಮಾಹಿತಿ ಇದೆ.
ಪರಿಷತ್ ಸಭಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿರುವ, ಬಸವರಾಜ ಹೊರಟ್ಟಿ, ಹೆಚ್.ಕೆ.ಕುಮಾರಸ್ವಾಮಿ, ಬಿ.ಎಂ.ಫರೂಕ್ ಹಾಗೂ ಡಾ.ಕೆ ಅನ್ನದಾನಿ ನಡುವೆ ಸಚಿವ ಸ್ಥಾನಕ್ಕಾಗಿ ಸ್ಪರ್ಧೆ ಏರ್ಪಟ್ಟಿದೆ ಎನ್ನಲಾಗುತ್ತಿದೆ. ಜೊತೆಗೆ ಧನುರ್ಮಾಸ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಭರ್ತಿ ಮಾಡುವುದು ಬೇಡವೆಂದಿದ್ದಾರೆ ಎನ್ನಲಾಗಿದೆ.
ನಿನ್ನೆ ತಡರಾತ್ರಿ ದೇವೇಗೌಡರ ಪದ್ಮನಾಭ ನಗರದ ನಿವಾಸದಲ್ಲಿ ನಡೆದ ಚರ್ಚೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಹೊಸವರ್ಷದ ಸಂಕ್ರಾಂತಿ ಬಳಿಕ ಖಾಲಿ ಇರುವ ಎರಡು ಸ್ಥಾನ ತುಂಬಲು ವರಿಷ್ಠರಾದ ಹೆಚ್.ಡಿ. ದೇವೇಗೌಡ, ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ಡಿ.ರೇವಣ್ಣ ಅವರು ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
