ಮೈಸೂರು
ಇನ್ನೆರಡು ದಿನದಲ್ಲಿ ಉಪ ಚುನಾವಣೆ ಸಂಬಂಧ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ಅವರು ಸೆಪ್ಟೆಂಬರ್ 30 ರೊಳಗೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಹಿನ್ನೆಲೆಯಲ್ಲಿ ಎರಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲೇಬೇಕಾಗಿದೆ ಎಂದು ಅವರು ಹೇಳಿದ್ದಾರೆ.ಚುನಾವಣೆ ನಡೆದೇ ನಡೆಯುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸ್ಪಷ್ಟಪಡಿಸಿರುವ ಕುಮಾರಸ್ವಾಮಿ 15 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಚುನಾವಣೆ ಎಲ್ಲ ಪಕ್ಷಗಳಿಗೂ ಅಗ್ನಿಪರೀಕ್ಷೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ಅವರು ಗೆಲುವು ಸಾಧಿಸಲು ಜೆಡಿಎಸ್ ಪಕ್ಷ ತನ್ನದೇ ಆದ ರಾಜಕೀಯ ತಂತ್ರಗಾರಿಕೆ ರೂಪಿಸಲಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲು ಸ್ಥಳೀಯ ನಾಯಕರಿಗೆ ಅವಕಾಶ ಕಲ್ಪಿಸಲಾಗುವುದು.ಉಪ ಚುನಾವಣೆ ಫಲಿತಾಂಶದ ನಂತರ ರಾಜಕೀಯ ವಲಯದಲ್ಲಿ ಹೊಸ ನಾಟಕ ಶುರುವಾಗುತ್ತದೆ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








