ಬೆಂಗಳೂರು :
ವಿಶ್ವಾಸಮತದಲ್ಲಿ ಮೈತ್ರಿ ಸರ್ಕಾರ ಸೋಲು ಹಿನ್ನಲೆಯಲ್ಲಿ ಪಕ್ಷ ಬಲವರ್ಧನೆಗೆ ಮುಂದಾದ ಜೆಡಿಎಸ್ ವರಿಷ್ಠರು, ಇಂದು ಮುಖಂಡರ ಸಭೆ ನಡೆಸುತ್ತಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸಭೆ ಆರಂಭವಾಗಿದೆ.
ಹಂಗಾಮಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣ, ಸಿ.ಎಸ್. ಪುಟ್ಟರಾಜು, ವೆಂಕಟರಾವ್ ನಾಡಗೌಡ ಸೇರಿದಂತೆ ಶಾಸಕರು, ಪಕ್ಷದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ.
ನಿನ್ನೆ ವಿಶ್ವಾಸ ಮತದಲ್ಲಿನ ಸೋಲು ಹಿನ್ನೆಲೆಯಲ್ಲಿ ಜೆಡಿಎಸ್ ಮುಂದಿನ ನಡೆ, ಅತೃಪ್ತ ಶಾಸಕರ ವಿರುದ್ಧ ಯಾವ ರೀತಿಯ ಅಸ್ತ್ರ ಬಳಸಬಹುದು. ಪಕ್ಷದ ವತಿಯಿಂದ ಯಾವ ರೀತಿಯ ಕ್ರಮಕ್ಕೆ ಮುಂದಾಗ ಬಹುದು ಎಂಬ ಕುರಿತು ಚರ್ಚೆ ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ.
ಈಗಿನ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರೆಸಬೇಕೆ?, ಬೇಡವೇ?, ಉಪ ಚುನಾವಣೆಯಲ್ಲಿ ಮೈತ್ರಿ ಮುಂದುವರೆಸುವ ಕುರಿತು ಜೆಡಿಎಸ್ ನಾಯಕರು ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದಾರೆ ಎನ್ನಲಾಗಿದೆ.