ಬೆಂಗಳೂರು:
ಹೆಚ್. ವಿಶ್ವನಾಥ್ ಅವರಿಗೆ ಮೊನ್ನೆ ಸಂಜೆ ಹೈದರಾಬಾದ್ ನಲ್ಲಿ ಲಘು ಹೃದಯಾಘಾತವಾಗಿದೆ.ವಿಮಾನ ನಿಲ್ದಾಣದಲ್ಲಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದ ವಿಶ್ವನಾಥ್ ಅವರನ್ನು ಕೂಡಲೇ ಹೈದರಾಬಾದ್ ನ ಎಲ್. ಬಿ. ನಗರದ ಓಜೋನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರೊಂದಿಗೆ ಜಯದೇವ ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ನಿರಂತರ ಸಂಪರ್ಕದಲ್ಲಿದ್ದು, ಆರೋಗ್ಯದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿಂದೆ ವಿಶ್ವನಾಥ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿ ಮೂರು ಸ್ಟಂಟ್ ಗಳನ್ನು ಅಳವಡಿಸಲಾಗಿತ್ತು. ಮೂರು ಸ್ಟಂಟ್ ಗಳ ಪೈಕಿ ಒಂದರಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಲಘು ಹೃದಯಾಘಾತ ಸಂಭವಿಸಿದೆ. ಸದ್ಯ ವಿಶ್ವನಾಥ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಭಾನುವಾರವರಗೆ ಪರಿಸ್ಥಿತಿ ನೋಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆತರುವ ಬಗ್ಗೆ ತೀರ್ಮಾನಿಸಲಾಗುವುದು. ಏರ್ ಅಂಬ್ಯುಲೆನ್ಸ್ ಅಥವಾ ಸಾಮಾನ್ಯ ವಿಮಾನದಲ್ಲೇ ಕರೆತರಬಹುದ ಎಂಬುದರ ಕುರಿತು ಆರೋಗ್ಯ ಸ್ಥಿತಿ ನೋಡಿ ಇಂದು ಸಂಜೆ ತೀರ್ಮಾನ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
