ಬೆಂಗಳೂರು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರನ್ನು ಅನರ್ಹಗೊಳಿಸಿ ಹಿಂದಿನ ಸ್ಪೀಕರ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಕರ್ನಾಟಕದ ಮೂರೂ ರಾಜಕೀಯ ಪಕ್ಷಗಳು ಡಿಸೆಂಬರ್ 5 ರ ಕದನಕ್ಕೆ ಸಜ್ಜಾಗಿದ್ದು ಜೆಡಿಎಸ್ ಇಂದು ತನ್ನ ಮೊದಲ ಕಂತಿನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಹತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ವತಿಯಿಂದ ಕ್ಯಾಂಡಿಡೇಟುಗಳನ್ನು ಹಾಕಿರುವ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಥರ್ಥಿ ಶರತ್ ಬಚ್ಚೇಗೌಡರಿಗೆ ಬೆಂಬಲ ಘೋಷಿಸಿದೆ.ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಸೋಮಶೇಖರ್ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದ್ದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಿಂದ ದೇವರಾಜ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಿಂದ ಶ್ರೀ ಮತಿ ಚೈತ್ರಾಗೌಡ ಎ ಅವರನ್ನು ಕಣಕ್ಕಿಳಿಸಿರುವ ಜೆಡಿಎಸ್,ಹಾವೇರಿ ಜಿಲ್ಲೆಯ ಹಿರೇಕೇರೂರ್ ವಿಧಾನಸಭಾ ಕ್ಷೇತ್ರದಿಂಧ ಉಜನಪ್ಪ ಜಟ್ಟೆಪ್ಪ ಕೋಡಿಹಳ್ಳಿ ಅವರನ್ನು ಕಣಕ್ಕಿಳಿಸಿದೆ.ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕ್ಷೇತ್ರದಿಂದ ಮಲ್ಲಿಕಾರ್ಜುನಪ್ಪ ಹಲಗೇರಿ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು ಬಳ್ಳಾರಿ ಜಿಲ್ಲೆಯ ವಿಜಯನಗರದಿಂದ ಎನ್.ಎಂ.ನಭಿ ಅವರನ್ನು ಕ್ಯಾಂಡಿಡೇಟ್ ಎಂದು ಘೋಷಣೆ ಮಾಡಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕೆ.ಪಿ.ಬಚ್ಚೇಗೌಡ,ಕೆ.ಆರ್.ಪುರಂನಿಂದ ಸಿ.ಕೃಷ್ಣಮೂರ್ತಿ,ಯಶವಂತಪುರದಿಂದ ಟಿ.ಎನ್. ಜವರಾಯಿಗೌಡ,ಶಿವಾಜಿನಗರದಿಂದ ತನ್ವೀರ್ ಅಹ್ಮದ್ ಉಲ್ಲಾ ಅವರನ್ನು ಕಣಕ್ಕಿಳಿಸಿದೆ.ಈ ಮಧ್ಯೆ ರಾಜ್ಯದ ವಿವಿಧ ಕ್ಷೇತ್ರಗಳಿಂದ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಆಗ್ನೇಯ ಪದವೀಧರರ ಕ್ಷೇತ್ರದಿಂದ ಆರ್.ಚೌಡರೆಡ್ಡಿ ತೂಪಲ್ಲಿ ಅವರನ್ನು ಕಣಕ್ಕಿಳಿಸಿರುವ ಜೆಡಿಎಸ್,ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ.ರಂಗನಾಥ್ ಅವರನ್ನು ಕಣಕ್ಕಿಳಿಸಿದೆ.ಪಶ್ಚಿಮ ಪದವೀಧರರ ಕ್ಷೇತ್ರದಿಂದ ಶಿವಶಂಕರ ಕಲ್ಲೂರ ಅವರು ಜೆಡಿಎಸ್ ಅಭ್ಯರ್ಥಿಯಾಗಿದ್ದು ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ತಿಮ್ಮಯ್ಯ ಪುರ್ಲೆ ಅವರನ್ನು ಕಣಕ್ಕಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ