ಲೋಕಸಭೆ ಚುನಾವಣೆ ತಾಲೀಮು ಶುರು ಮಾಡಿದ ಜೆಡಿಎಸ್

ಬೆಂಗಳೂರು

         ಲೋಕಸಭೆ ಚುನಾವಣೆಗೆ ಜೆಡಿಎಸ್ ತಾಲೀಮು ಶುರುಮಾಡಿದೆ. ಕಾಂಗ್ರೆಸ್ ಜೆಡಿಎಸ್ ಹೊರತಾಗಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರೆಯಲಿದ್ದು, ಜ.3 ರಂದು ಹಾಲಿ ಶಾಸಕರು, ಮಾಜಿ ಶಾಸಕರು, ರಾಜ್ಯಮಟ್ಟದ ಪದಾಧಿಕಾರಿಗಳು, ಸಂಸತ್ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆ ನಡೆಯಲಿದೆ.

         28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 10, ಬಿಜೆಪಿ 16 ಹಾಗೂ 2 ಕ್ಷೇತ್ರಗಳಲ್ಲಿ ಜೆಡಿಎಸ್ ಇದೆ. 1998 ರಲ್ಲಿ 16 ಜೆಡಿಎಸ್ ಸ್ಥಾನಗಳಲ್ಲಿದ್ದ ಜೆಡಿಎಸ್ ಸಂಖ್ಯೆ ಈಗ ಗಣನೀಯವಾಗಿ ಇಳಿಕೆಯಾಗಿದೆ. ಹಾಗಾಗಿ ಮೊದಲಿನಂತೆ ಪಕ್ಷವನ್ನು ಬಲಗೊಳಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ಬಿಜೆಪಿ ಪ್ರಾಬಲ್ಯವುಳ್ಳ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಹಾಕಲು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಂತ್ರ ರೂಪಿಸುತ್ತಿದ್ದಾರೆ ಎಂದು ದೇವೇಗೌಡರು ತಿಳಿಸಿದ್ದಾರೆ.

         ಲೋಕಸಭೆ ಚುನಾವಣೆಗೂ ಮುನ್ನ ತಳಮಟ್ಟದಲ್ಲಿ ಪಕ್ಷ ಸಂಘಟನೆಯಾಗಬೇಕಿದ್ದು, ಕಾಂಗ್ರೆಸ್ ಜೆಡಿಎಸ್ ಸ್ಥಳೀಯ ಕಾರ್ಯಕರ್ತರು ಇನ್ನೂ ಒಗ್ಗಟ್ಟಾಗಬೇಕಿದೆ. ಜಿಲ್ಲಾವಾರು ಸಭೆಗಳನ್ನು ಮಾಡುವ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಜ.3 ಕ್ಕೂ ಮೊದಲು ಸರಣಿ ಸಭೆಗಳನ್ನು ಪಕ್ಷ ನಡೆಸಲಿದೆ.

          ಡಿ.26 ರಂದು ಬೆಂಗಳೂರು ಕ್ಷೇತ್ರ, 27, 28 ರಂದು ದೆಹಲಿಯಲ್ಲಿ ಲೋಕಸಭಾ ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ. ಈ ಮೂರು ದಿನಗಳ ಸಭೆಗಳಾಧಾರದ ಮೇಲೆ ನಡೆಯಲಿರುವ ಜ. 3 ರ ಸಭೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ನೀಡಲಾಗುತ್ತಿದ್ದು, ಕಾಂಗ್ರೆಸ್ ಬೆಂಬಲವಿರಲಿ ಬಿಡಲಿ ಸ್ವಂತ ಆಧಾರದ ಮೇಲೆ ಪಕ್ಷವನ್ನು ಗಟ್ಟಿಗೊಳಿಸಬೇಕೆಂಬ ಸಂದೇಶ ರವಾನೆಯಾಗಲಿದೆ.

         ಈಗಾಗಲೇ ರಾಷ್ಟ್ರಮಟ್ಟದಲ್ಲಿ ಲೋಕಸಭೆ ಚುನಾವಣೆಗೆ ಈ ಬಾರಿ ಬಿಜೆಪಿ ವಿರೋಧಿ ಶಕ್ತಿಗಳು ಒಂದಾಗುತ್ತಿದ್ದು, ಇದರ ನೇತೃತ್ವವನ್ನು ಹೆಚ್.ಡಿ.ದೇವೇಗೌಡರು ವಹಿಸಿಕೊಂಡಿದ್ದಾರೆ. ಬಿಜೆಪಿ ವಿರುದ್ಧದ ಸಂಯುಕ್ತ ಮೈತ್ರಿಕೂಟಕ್ಕೆ ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಎರಡೂ ಒಟ್ಟಾಗಿ ಸರ್ಕಾರ ರಚನೆ ಮಾಡುವ ಮೂಲಕ ದೇಶಕ್ಕೆ ಸಂದೇಶ ರವಾನೆಯಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap