ಹಾವೇರಿ :
ನಗರದ ಜಿಲ್ಲಾ ಆಸ್ಪತ್ರೆಗೆ ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಕೆ.ಎಸ್. ಸಿದ್ದಬಸಪ್ಪಯಾದವ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಕೋವಿಢ್ 19 ವ್ಯವಸ್ಥೆ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕಾದ ಡಾ ನಾಗರಾಜ್ ನಾಯಕ ಅವರೊಂದಿಗೆ ಚರ್ಚಿಸಿದರು. ಹಾವೇರಿ ಜಿಲ್ಲೆ ಕೋವಿಡ್ ಮುಕ್ತವಾಗಿರಲು ತಮ್ಮ ಇಲಾಖೆಯ ಪ್ರತಿಯೊಬ್ಬರ ಸೇವೆ ಅಪಾರವಾಗಿದೆ.ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯವರಿಗೆ ತುಂಬ ಹೃದಯದ ಕೃತಜ್ಞತೆ ಸಲ್ಲಿಸಿ, ತಮ್ಮ ಕಾರ್ಯ ಶ್ಲಾಘನೀಯವಾಗಿದೆ ಎಂದು ಕೆ.ಎಸ್ ಸಿದ್ದಬಸಪ್ಪ ಯಾದವ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿಯವರು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ