90 ಕೊಠಡಿಗಳ ಜೇನುಮಲೆ ವಸತಿಗೃಹ ಉದ್ಘಾಟಿಸಿದ ಸಿ ಎಂ

ಬೆಂಗಳೂರು

       ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರಸ್ವಾಮಿ ಬೆಟ್ಟಕ್ಕೆ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ, ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 90 ಕೊಠಡಿಗಳ ಜೇನುಮಲೆ ವಸತಿಗೃಹ ಮತ್ತು 90 ಅಂಗಡಿ ಮಳಿಗೆಗಳನ್ನು ಉದ್ಘಾಟಿಸಿದರು.

        ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂದಿನ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಮಲೆ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆಮಾಡಿ ಮುಖ್ಯಮಂತ್ರಿಗಳನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಪ್ರಾಧಿಕಾರದ ಸಭೆಯನ್ನು ನಡೆಸಿ ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸುತ್ತೇನೆ. ಭಕ್ತಾಧಿಗಳಿಗೆ ಅಗತ್ಯವಿರುವ ಮೂಲಸೌಲಭ್ಯಗಳನ್ನು ಒದಗಿಸಿ ಕೊಡಲು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link