ಡಾ.ಬಾಬು ಜಗಜೀವನರಾಂ ಅವರ ಜಯಂತಿ : ಜಿಲ್ಲಾಡಳಿತವತಿಯಿಂದ ಸರಳವಾಗಿ ಆಚರಣೆ

ಬಳ್ಳಾರಿ

        ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಾಯದಲ್ಲಿ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 112ನೇ ಜಯಂತಿಯನ್ನು ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಸರಳವಾಗಿ ಆಚರಣೆ ಮಾಡಲಾಯಿತು.

        ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಜಯಂತಿಯನ್ನು ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಡಾ.ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಜಯಂತಿಯ ಅಂಗವಾಗಿ ಯಲ್ಲಪ್ಪ ಹಾಗೂ ಅವರ ತಂಡದವರಿಂದ ಗಾಯನವನ್ನು ಪ್ರಸ್ತುತಪಡಿಸಿದರು.

         ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಜಿಲ್ಲಾ ಪಂಚಾಯತ್ ಸಿಇಒ ನಿತೀಶ್.ಕೆ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಣ್ಣ, ಮಹಾನಗರ ಪಾಲಿಕೆ ಆಯುಕ್ತರಾದ ತುಷಾರಮಣಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಉಪ ನಿರ್ದೇಶಕ ಕೆ.ನಾಗರಾಜ್, ಪರಿಶಿಷ್ಟ ವರ್ಗಗಳ ಜಿಲ್ಲಾ ಕಲ್ಯಾಣಧಿಕಾರಿ ಶುಭಾ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಸಕೀನಾ, ತಾಲೂಕು ಸಮಾಜ ಕಲ್ಯಾಣಧಿಕಾರಿ ಪುಷ್ಪ ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link