ಬೆಂಗಳೂರು
ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ಬೃಹತ್ ಉದ್ಯೋಗಮೇಳಕ್ಕೆ ಸಂಸದ ಡಾ.ಎಂ.ವೀರಪ್ಪಮೊಯ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉದ್ಯೋಗಮೇಳಗಳು, ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರ ನಡುವಿನ ಸಂಪರ್ಕ ಸೇತುವೆಗಳಾಗಿ ಕೆಲಸ ಮಾಡುತ್ತವೆ, ಆದ್ದರಿಂದ ನಿರುದ್ಯೋಗ ನಿವಾರಣೆಗೆ ಉದ್ಯೋಗಮೇಳಗಳನ್ನು ಆಯೋಜಿಸಲು ಹೆಚ್ಚು ಒತ್ತು ಕೊಡಬೇಕು ಎಂದು ಹೇಳಿದರು. ಮೇಳದಲ್ಲಿ ಭಾಗವಹಿಸಲು 10ಸಾವಿರಕ್ಕೂ ಹೆಚ್ಚು ಉದ್ಯೋಗಕಾಂಕ್ಷಿಗಳು ಹೆಸರು ನೋಂದಾಯಿಸಿದ್ದಾರೆ.
ಆಹಾರ ಸಂಸ್ಕರಣಾ ಸಂಸ್ಥೆಗಳು, ಸಿದ್ಧ ಉಡುಪ ತಯಾರಿಕಾ ಸಂಸ್ಥೆಗಳು ಸೇರಿದಂತೆ ಒಟ್ಟು 150ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಮೇಳದಲ್ಲಿ ಭಾಗವಹಿಸಲಿವೆ. ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಜಿಲ್ಲೆಯ ಆರೂ ತಾಲೂಕು ಕೇಂದ್ರಗಳಲ್ಲಿ ಕೌಶಲ ತರಬೇತಿ ಮತ್ತು ಸಂದರ್ಶನ ಎದುರಿಸುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
