ನಿರುದ್ಯೋಗಿಗಳಿಗೆ ಉದ್ಯೋಗ ಮೇಳ ಸಹಕಾರಿ : ಚಂದ್ರಶೇಖರಯ್ಯ

ಮಧುಗಿರಿ

      ತಾಲ್ಲೂಕು ಬರಪೀಡಿತ ಪ್ರದೇಶವಾಗಿದ್ದು ಇಲ್ಲಿನ ವಿದ್ಯಾವಂತರು ಉದ್ಯೋಗವನ್ನು ಅರಸಿ ಹೊರ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಸರಕಾರದ ವತಿಯಿಂದ ಆಯೋಜಿಸಿರುವ ಉದ್ಯೋಗ ಮೇಳವು ಸಹಕಾರಿಯಾಗಲಿದೆ ಎಂದು ಉಪವಿಭಾಗಾಧಿಕಾರಿ ಎಚ್.ಜಿ.ಚಂದ್ರಶೇಖರಯ್ಯ ಅಭಿಪ್ರಾಯಪಟ್ಟರು.

        ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಉದ್ಯೋಗ ಮೇಳ ಮತ್ತು ನೋಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಯಲ್ಲಿಯೇ ಉದ್ಯೋಗ ಸಿಗುವುದು ಬಹಳ ವಿರಳವಾಗಿದ್ದು, ಪದವಿ ಪಡೆದ ನಂತರ ವಿದ್ಯಾರ್ಥಿಗಳು ಉದ್ಯೋಗಕ್ಕೆ ಅರಸಿ ಹೋಗುವುದು ಸಹಜ.

        ಆದರೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆಯ ಬೇಕಾದರೆ ಹರಸಾಹಸ ಪಡಬೇಕಾಗಿದೆ. ಬೆಂಗಳೂರಿನಂತಹ ಮಹಾ ನಗರಗಳಲ್ಲಿ ಇಂಗ್ಲೀಷ್ ಭಾಷೆ ಅವಶ್ಯಕವಾಗಿದ್ದು, ಗಡಿ ಭಾಗದ ವಿದ್ಯಾವಂತರು ನಗರಗಳಲ್ಲಿನ ಇತರರ ಜೊತೆ ಉದ್ಯೋಗಕ್ಕಾಗಿ ಸ್ಪರ್ಧೆ ಎದುರಿಸಿ ಉದ್ಯೋಗವನ್ನು ಪಡೆಯಬೇಕಾಗಿದೆ ಆದ್ದರಿಂದ ಸರಕಾರದ ವತಿಯಿಂದ ಆಯೋಜಿಸಿರುವ ಉದ್ಯೋಗ ಮೇಳದ ಸಂಪೂರ್ಣ ಲಾಭ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

        ತಹಸೀಲ್ದಾರ್ ಎಂ.ನಂದೀಶ್ ಮಾತನಾಡಿ, ಎಸ್‍ಎಸ್‍ಎಲ್‍ಸಿ, ಐಟಿಐ, ಡಿಪ್ಲೋಮಾ, ಪದವಿ ಸೇರಿದಂತೆ ಮತ್ತಿತರ ವಿಷಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಇಂತಹ ಉದ್ಯೋಗ ಮೇಳವು ಸಹಕಾರಿಯಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮವಾದಂತಹ ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ನಮ್ಮ ತಾಲ್ಲೂಕು ಆಡಳಿತದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

          ಸಂಪನ್ಮೂಲ ವ್ಯಕ್ತಿ ಮನೋಜ್, ಪುರಸಭೆ ಮುಖ್ಯಾಧಿಕಾರಿ ಡಿ.ಲೋಹಿತ್, ತಾಪಂ ಇಓ ನಂದಿನಿ, ಎಡಿಓ ದೊಡ್ಡಸಿದ್ದಪ್ಪ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮುನೀಂದ್ರ ಕುಮಾರ್, ಮಿಡಿಗೇಶಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಟಿ.ಎನ್. ನರಸಿಂಹಮೂರ್ತಿ, ಉಪನ್ಯಾಸಕಿ ಡಾ. ಮಂಜುಳಾ ಭಾರ್ಗವಿ, ಪುಟ್ಟರಾಜು, ಆರ್ ಐ ಜಯರಾಂ, ಹರ್ಷದ್ ಹುಸೇನ್, ವಿದ್ಯಾರ್ಥಿಗಳು, ಮತ್ತಿತರರು ಇದ್ದರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link