ಸೇವಾ ಭದ್ರತೆಗಾಗಿ ಬಿಸಿಯೂಟ ತಯಾರಕರ ಒತ್ತಾಯ

ದಾವಣಗೆರೆ:

         ಸೇವಾ ಭದ್ರತೆ, ಕನಿಷ್ಟ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಬಿಸಿಯೂಟ ತಯಾರಕರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

          ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಸಿಯೂಟ ತಯಾರಕರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

           ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು, ಕಳೆದ 16 ವರ್ಷದಿಂದಲೂ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರಿಗೆ ನೀಡುತ್ತಿರುವ 2600 ರು. ಹಣದಲ್ಲಿ ಜೀವನ ನಡೆಸುವುದೇ ದುಸ್ತರವಾಗಿದೆ. ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ಜಾರಿಗೊಳ್ಳಬೇಕು. ಕೆಲಸದ ಭದ್ರತೆಯನ್ನು ಕಲ್ಪಿಸಬೇಕು. ನಿವೃತ್ತಿ ವೇತನ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

           ರಾಜ್ಯಾದ್ಯಂತ ಬಿಸಿಯೂಟ ತಯಾರಕರು ತಮ್ಮ ಶಾಲೆಗಳಲ್ಲಿ ಡಿ.2ರಿಂದ ಮಧ್ಯಾಹ್ನದ ಬಿಸಿಯೂಟ ತಯಾರಿಕೆ ಕೆಲಸವನ್ನು ಸ್ಥಗಿತಗೊಳಿಸಿ, ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ಹೋರಾಟಕ್ಕೆ ಆಗಮಿಸಬೇಕು. ಇದು ಬಿಸಿಯೂಟ ತಯಾರಕರ ಬದುಕಿನ ಹೋರಾಟದ ಪ್ರಶ್ನೆಯಾಗಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸುವವರೆಗೂ ಅನಿರ್ಧಿಷ್ಟಾವಧಿ ಹೋರಾಟ ನಡೆಸಲಾಗುವುದು. ಆದ್ದರಿಂದ ಎಲ್ಲಾ ಬಿಸಿಯೂಟ ತಯಾರಕಿಯರು ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

           ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ಹೊನ್ನಪ್ಪ ಮರೆಯಮ್ಮನವರ್, ಖಜಾಂಚಿ ರುದ್ರಮ್ಮ ಬೆಳಲಗೆರೆ, ಎನ್.ಶಿವಣ್ಣ, ಆವರಗೆರೆ ವಾಸು, ರಂಗಸ್ವಾಮಿ ಮತ್ತಿತರರು ಭಾಗವಹಿಸಿದ್ದರು

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link