ಎಂ ಎನ್ ಕೋಟೆ :
ಗುಬ್ಬಿ ತಾಲ್ಲೂಕಿನ ಎಂ ಎನ್ ಕೋಟೆ ಸಮೀಪದ ಕೋಟೆ ಗುಡ್ಡದ ಹತ್ತಿರ ಜೂಜಾಡುತ್ತಿದ್ದ 6 ಜನರನ್ನು ಚೇಳೂರು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಚೇಳೂರು ಪಿಎಸ್‍ಐ ಪ್ರಕಾಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳಾದ ಸಿದ್ದರಾಜು, ಪುಟ್ಟರಾಜು, ಬಸವರಾಜು, ಕುಮಾರ್, ಮಹೇಶ್, ಸಿದ್ದರಾಮಯ್ಯ, ಸಿದ್ದಯ್ಯ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ 6350 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಮಧು, ನಟರಾಜು, ಅನಂತ್ ರಾಜು, ಸಂಜೀವರೆಡ್ಡಿ, ಮಧುಸೂದನ್ ದಾಳಿಯಲ್ಲಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ