ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಹೈಕಮಾಂಡ್ ಆದೇಶ ಪಾಲಿಸೋಣ : ಡಿ.ಸುಧಾಕರ್

ಹಿರಿಯೂರು :

      ರಾಜ್ಯದ ಮೈತ್ರಿ ಸರ್ಕಾರದ ಜನಪರ ಯೋಜನೆಗಳನ್ನು ಜನರ ಮುಂದಿಟ್ಟು ಈ ಲೋಕಸಭಾ ಚುನಾವಣೆಯಲ್ಲಿ ಮತಯಾಚನೆ ಮಾಡಬೇಕು. ಸರಳ ಸಜ್ಜನರಾದ ಸಂಸದ ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಹೈಕಮಾಂಡ್ ಆದೇಶ ಪಾಲಿಸೋಣ ಎಂಬುದಾಗಿ ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.

      ನಗರದ ಹೊರವಲಯದಲ್ಲಿರುವ ತೋಟದ ಮನೆಯೊಂದರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಂಖಂಡರು, ತಾಲ್ಲೂಕು ಪಂಚಾಯತ್ ಹಾಗೂ ಚುನಾಯಿತ ಜನಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

      ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮೇಲೆ ಮೈತ್ರಿ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ಇದೆ. ಈದಿಸೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಬಿ.ಎಚ್.ಮಂಜುನಾಥ್, ಜಿ.ಪಂ.ಮಾಜಿ ಅಧ್ಯಕ್ಷ ಎಂ.ಜಯಣ್ಣ, ಶಿವಪ್ರಸಾದ್‍ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ತಾ.ಪಂ.ಸದಸ್ಯ ಓಂಕಾರಪ್ಪ, ನಗರಸಭೆ ಸದಸ್ಯ ರವಿಚಂದ್ರನಾಯ್ಕ್ ಇತರರು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap