ಪದವೀಧರ ಕ್ಷೇತ್ರ : ಕೆ.ಎಂ.ಸುರೇಶ್ ಸ್ವತಂತ್ರ ಸ್ಪರ್ಧೆ?

ಪಾವಗಡ

    ಕರ್ನಾಟಕ ರಾಜ್ಯ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆಂದು ಡಾ. ಕೆ. ಎಂ.ಸುರೇಶ್ ತಿಳಿಸಿದ್ದಾರೆ. ಅವರು ಗುರುವಾರ ಪಟ್ಟಣದ ಆಂಧ್ರಗಿರಿ ಭವನದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ 20 ವರ್ಷಗಳಿಂದ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ 14 ವರ್ಷಗಳಿಂದ ಸ್ಫರ್ಧಾವಿಜೇತ ಮಾಸ ಪತ್ರಿಕೆಯನ್ನು ಪ್ರಕಟಿಸುತ್ತಿದ್ದೇನೆ. ಆಯ್ಕೆಯಾದರೆ ಕೇವಲ 1 ರೂ. ಸಂಬಳ ಪಡೆದು ಸರಸ್ಪತಿ ಸೇವೆ ಮಾಡುವುದಾಗಿ ತಿಳಿಸಿದರು. ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನವನಾಗಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸ್ಪರ್ಧಾ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತದೆ.

    ಕಾಲಕಾಲಕ್ಕೆ ಎಸ್.ಎಸ್.ಎಲ್.ಸಿ. ಮತ್ತು ಪಿ.ಯೂ.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತರಬೇತಿ ನೀಡಲಾಗುತ್ತದೆ. ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ರಾಜ್ಯ ಸರ್ಕಾರ ನೇಮಕಾತಿ ಮಾಡುತ್ತಿಲ್ಲ. ರಾಜ್ಯದಲ್ಲಿ 2 ಲಕ್ಷ ಹುದ್ದೆಗಳು ಖಾಲಿ ಇದ್ದು, ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ಐಎಎಸ್ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಎದುರಿಸಬೇಕಾಗಿದ್ದು, ಕರ್ನಾಟಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಇದನ್ನು ಕನ್ನಡ ಭಾಷೆಯಲ್ಲಿ ಬರೆಯುವಂತೆ ಕ್ರಮ ಕೈಗೊಂಡರೆ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಪಾಸಾಗುತ್ತಾರೆ.

    ಕೋವಿಡ್-19 ನಿಂದ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರು ಸಂಕಟದಲ್ಲಿದ್ದು, ಇವರ ಕಷ್ಟಕ್ಕೆ ಸ್ಪಂದಿಸಬೇಕಾಗುತ್ತದೆ. ಯಾವುದೆ ಆಮಿಷಕ್ಕೆ ಒಳಗಾಗದೆ ಚುನಾವಣಾ ಅಕ್ರಮಗಳನ್ನು ತಡೆಯಬೇಕಾಗಿದೆ. ಚುನಾವಣಾ ನೀತಿಗಳನ್ನು ಬದಲಾಯಿಸಬೇಕಾಗಿದೆ. ಶಿಕ್ಷಕರ ಸಮಸ್ಯೆಗಳನ್ನು ಅರಿತಿದ್ದು, ಬಗೆಹರಿಸುವುದಾಗಿ ತಿಳಿಸಿದರು. ಈ ವೇಳೆ ಆಟೋಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link