ಬೆಂಗಳೂರು:
ಕೊರೊನಾ ಮಹಾಮಾರಿ ಸಾಂಕ್ರಾಮಿಕದಿಂದ ಕಳೆದ ನಾಲ್ಕೂವರೆ ತಿಂಗಳಿನಿಂದ ಬಂದ್ ಆಗಿದ್ದ ಕಲಾಸಿಪಾಳ್ಯ ಮತ್ತು ಕೆ.ಆರ್.ಮಾರುಕಟ್ಟೆಗಳು ಸೆ.1ರಿಂದ ಪುನರಾರಂಭಗೊಳ್ಳಲಿದ್ದು, ಸಕಲ ಸಿದ್ಧತೆಗಳು ನಡೆದಿವೆ.ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ನಾಲ್ಕೂವರೆ ತಿಂಗಳಿಂದ ಎರಡೂ ಮಾರುಕಟ್ಟೆಗಳನ್ನು ಬಂದ್ ಮಾಡಲಾಗಿತ್ತು. ಇದೀಗ ಅನ್‌ಲಾಕ್ 4.0 ಹಿನ್ನೆಲೆಯಲ್ಲಿಮಾರುಕಟ್ಟೆಗಳನ್ನು ಸಾಮಾಜಿಕ ಅಂತರದೊಂದಿಗೆ ತೆರೆಯಲಾಗುತ್ತಿದೆ.
ಇದಕ್ಕಾಗಿ ಮಾರುಕಟ್ಟೆ ವ್ಯಾಪ್ತಿಯ ಹಲವು ಭಾಗಗಳಲ್ಲಿಸ್ಯಾನಿಟೈಸ್ ಮಾಡಲಾಗಿದೆ. ಬಿಬಿಎಂಪಿ ಸಿಬ್ಬಂದಿ ಸ್ವಚ್ಛತೆಯಲ್ಲಿನಿರತರಾಗಿದ್ದಾರೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧಾಧಿರಣೆ ಮೇಲೆ ನಿಗಾ ಇಡಲು ಮಾರ್ಷಲ್‌ಗಳ ನೇಮಕಕ್ಕೂ ಪಾಲಿಕೆ ನಿರ್ಧರಿಸಿದೆ . ಮಾರುಕಟ್ಟೆಯೊಳಗೆ ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಕೆಲವು ಅಡಿಗಳ ಅಂತರದಲ್ಲಿ ಬಾಕ್ಸ್‌ಗಳನ್ನು ನಿರ್ಮಿಸಲಾಗಿದೆ. ಪಾಲಿಕೆ ಸೂಚನೆಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಎಲ್ಲಾ ಮಾರಾಟಗಾರರು ತಿಳಿಸಿದ್ದೇವೆ” ಎಂದು ಕೆ.ಆರ್. ಮಾರುಕಟ್ಟೆ ಸಗಟು ವ್ಯಾಪಾರಿಗಳ ಸಂಘ ಅಧ್ಯಕ್ಷ ದಿವಾಕರ್ ತಿಳಿಸಿದ್ದಾರೆ.
ಹೂವಿನ ಮಾರುಕಟ್ಟೆ ಸಮಸ್ಯೆ
ಮಾರುಕಟ್ಟೆಯ ಎಲ್ಲಾ ವ್ಯಾಪಾರಿ ತಾಣದಲ್ಲೂ ಸ್ಥಳಾವಕಾಶವಿದೆ. ಆದರೆ, ಹೂವು ಮಾರಾಟ ಸ್ಥಳ ಕಿಷ್ಕಿಂಧೆಯಂತಿದೆ. ಜತೆಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿಬರುವುದರಿಂದ ಅಲ್ಲಿಸಾಮಾಜಿಕ ಅಂತರ ಕಾಪಾಡುವುದು ಕಷ್ಟ. ಕಲಾಸಿಪಾಳ್ಯ ಮಾರುಕಟ್ಟೆಯೂ ರೈತರು, ವ್ಯಾಪಾರಿಗಳಿಂದ ತುಂಬಿರುವುದರಿಂದ ಇಲ್ಲಿಯೂ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ. ಕೆ.ಆರ್. ಮಾರುಕಟ್ಟೆ ತ್ಯಾಜ್ಯ ವಿಲೇವಾರಿಗಾಗಿ ಹೊಸ ವಾಹನಗಳನ್ನು ಸಜ್ಜಾಗಿ ಇರಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ