ಹಿರಿಯೂರು :

ನಗರದ ತೇರುಮಲ್ಲೇಶ್ವರಸ್ವಾಮಿ ದೇವಾಲಯದ ಮುಂಭಾಗದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ‘ಕಮಲ ಜ್ಯೋತಿ’ ಸಂಕಲ್ಪ ದಿವಸ ಕಾರ್ಯಕ್ರಮ ನಡೆಯಿತು.
ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ರಾಜ್ಯ ಬಿಜೆಪಿ ಒಬಿಸಿ ಘಟಕದ ಉಪಾಧ್ಯಕ್ಷ ಡಿ.ಟಿ. ಶ್ರೀನಿವಾಸ್ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಾರತ ನಕ್ಷೆಯನ್ನು ಬಿಡಿಸಿ ಹೊರಭಾಗದಲ್ಲಿ ದೀಪಗಳನ್ನು ಹಚ್ಚಲಾಯಿತು. ತಾಲೂಕು ಬಿಜೆಪಿ ಅಧ್ಯಕ್ಷ ದ್ಯಾಮೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾಮೋರ್ಚಾ ತಾಲೂಕು ಕಾರ್ಯದರ್ಶಿ ಶೋಭಾ, ಲಲಿತಾ, ನಾಗರತ್ನ, ಪ್ರಮೀಳಾ, ತುಳಸಿ, ತನುಜಾ,ಕುಸುಮ, ಮೋಹಿನಿ, ಚಂದ್ರವನದ, ರೋಜಾವತಿ, ಭಾಗ್ಯ, ಮಂಜುಳಾ, ನಾಗಸುಂದರಮ್ಮ, ಸೌಮ್ಯ, ಸುಜಾತ, ಚೇತನ, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಕೇಶವಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ಮಲ್ಲೇಶ್‍ಕುಮಾರ್, ಹರೀಶ್, ಸಂದೀಪ್, ರಘು ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








