ನೆರೆ ಹಿನ್ನೆಲೆಯಲ್ಲಿ ಸರಳ ಕನಕ ಜಯಂತಿ

ದಾವಣಗೆರೆ

    ಈ ಬಾರಿ ನೆರೆಗೆ ಅನೇಕ ಜಿಲ್ಲೆಗಳು ತುತ್ತಾದ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ನ.15 ರಂದು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಆಚರಿಸಲಾಗುತ್ತಿರುವ ಕನಕದಾಸರ ಜಯಂತಿಯನ್ನು ನೆರೆ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಸಭೆ ನಿರ್ಧರಿಸಿತು.ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಕನಕದಾಸರ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪÀೂರ್ವಭಾವಿ ಸಭೆಯಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

    ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ರಾಜ್ಯದಲ್ಲಿ ಈ ಬಾರಿ ನೆರೆಗೆ ಅನೇಕ ಜಿಲ್ಲೆಗಳು ತುತ್ತಾದ ಹಿನ್ನೆಲೆಯಲ್ಲಿ ಮಹಾತ್ಮರ ಜಯಂತಿಗಳನ್ನು ಸರಳವಾಗಿ ಆಚರಿಸಿ, ಜಯಂತಿಯ ಅನುದಾನವನ್ನು ನೆರೆ ಸಂತ್ರಸ್ತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುತ್ತಿದೆ. ಅದೇ ರೀತಿಯಲ್ಲಿ ನ.15 ರಂದು ಇರುವ ಕನಕದಾಸರ ಜಯಂತಿಯನ್ನು ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಿ ಉಳಿದ ಅನುದಾನವನ್ನು ನೆರೆ ಸಂತ್ರಸ್ತರ ನಿಧಿಗೆ ನೀಡುವ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡೋಣ ಎಂದರು.

    ಯಾವುದೇ ಮೆರವಣಿಗೆ, ವೇದಿಕೆ ಕಾರ್ಯಕ್ರಮಗಳಿಲ್ಲದೇ, ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಜಯಂತಿ ಆಚರಿಸಲಾಗುವುದು. ಸರಳ ಆಚರಣೆಯಲ್ಲಿ ಉಪನ್ಯಾಸಕರೋರ್ವರಿಂದ ಕನಕದಾಸರ ಕುರಿತು ಉಪನ್ಯಾಸ ಏರ್ಪಡಿಸಲಾಗುವುದು. ಹಾಗೂ ಪ್ರೌಢ ಮತ್ತು ಪಿಯು ವಿದ್ಯಾರ್ಥಿಗಳಿಗೆ ಭಕ್ತ ಕನಕದಾಸರ ಚಿತ್ರ ಬಿಡಿಸುವ ಹಾಗೂ ‘ಭಕ್ತ ಕನಕದಾಸರ ಕೊಡುಗೆ’ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

    ಇದಕ್ಕೆ ಪ್ರತಿಕ್ರಯಿಸಿದ ಕುರುಬರ ಸಂಘದ ಜಿಲ್ಲಾಧ್ಯಕ್ಷ ಕೆಂಗೋ ಹನುಮಂತಪ್ಪ, ಕನಕದಾಸರ ಜಯಂತಿಯ ಸರಳ ಆಚರಣೆಗೆ ತಮ್ಮ ಸಮ್ಮತಿ ಇದೆ. ಸರಳವಾಗಿ ಆಚರಿಸಿ ಉಳಿದ ಅನುದಾನದ ಮೊತ್ತವನ್ನು ನೆರೆ ಸಂತ್ರಸ್ತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದು ಒಳ್ಳೆಯದು ಎಂದು ಹೇಳಿದರು.

    ನಗರ ಕುರುಬ ಸಂಘದ ಕಾರ್ಯದರ್ಶಿ ಬಳ್ಳಾರಿ ಷಣ್ಮುಖಪ್ಪ ಮಾತನಾಡಿ, ಈ ಬಾರಿ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಿಸಿ ಈ ಜಯಂತಿಯ ಅನುದಾನವನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ನೀಡೋಣ. ಮುಂದಿನ ಬಾರಿ ಅದ್ದೂರಿಯಾಗಿ ಜಯಂತಿಯನ್ನು ಆಚರಿಸೋಣ ಎಂದು ಸಲಹೆ ನೀಡಿದರು.

   ಬೀರೇಶ್ವರ ದೇವಸ್ಥಾನದ ಕಾರ್ಯದರ್ಶಿ ಪ್ರತಿ ವರ್ಷದಂತೆ ಈ ಬಾರಿಯೂ ಜಯಂತಿಯನ್ನು ಬೀರೇಶ್ವರ ದೇವಸ್ಥಾನದ ಆವರಣದಲ್ಲಿ ಸರಳವಾಗಿ ಆಚರಿಸೋಣ. ಕನಕದಾಸರು ಜಾತ್ಯಾತೀತವಾಗಿ ಹೋರಾಟ ಮಾಡಿದವರು. ಆದ್ದರಿಂದ ಎಲ್ಲ ಸಮಾಜ ಬಾಂಧವರು ಜಾತ್ಯಾತೀತವಾಗಿ ಜಯಂತಿಯಲ್ಲಿ ಪಾಲ್ಗೊಳ್ಳಬೇಕು. ಎಲ್ಲರೂ ಸೇರಿ ಜಯಂತಿ ಆಚರಿಸೋಣ ಎಂದರು.

     ಕುರುಬ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕಿಕೆರೆ ಸಿದ್ದಪ್ಪ ಮಾತನಾಡಿ, ಕನಕದಾಸರ ಜಯಂತಿಯನ್ನು ಈ ಹಿಂದೆ ಆಚರಿಸಿದಂತೆ ಬೀರಲಿಂಗೇಶ್ವರ ದೇವಸ್ಥಾನ ಆವರಣ ಅಥವಾ ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಸರಳವಾಗಿ ಆಚರಿಸುವುದು ಸೂಕ್ತ ಎಂದರು.

     ಕುರುಬರ ಹಾಸ್ಟೆಲ್‍ನ ನಿರ್ದೇಶಕ ಅಡಾಣಿ ಸಿದ್ದಪ್ಪ ಮಾತನಾಡಿ, ಕನಕದಾಸರ ಜಯಂತಿ ಅಂಗವಾಗಿ ಪ್ರೌಢ ಮತ್ತು ಪಿಯು ವಿದ್ಯಾರ್ಥಿಗಳಿಗೆ ಕನಕದಾಸರ ಚಿತ್ರ ಬರೆಯುವ ಮತ್ತು ಕನಕದಾಸರ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸುವಂತೆ ಹಾಗೂ ನಗರದಲ್ಲಿ ಕನಕ ಭವನ ನಿರ್ಮಿಸಲು ನಿವೇಶನ ಒದಗಿಸಿಕೊಡುವಂತೆ ಮನವಿ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link