ಹಾವೇರಿ:
ಜಿಲ್ಲೆಯ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದಲ್ಲಿ ಕನಕ ಜಯಂತೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಪೀಠದ ಜಗದ್ಗುರು ಗಳಾದ ಶ್ರೀನಿರಂಜನಾನಂದ ಪುರಿ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಪೂಜಾ ಕೈಂಕರ್ಯಗಳೊಂದಿಗೆ ಶ್ರೀಕನಕ ತೊಟ್ಟಿಲೋತ್ಸವ ಕಾರ್ಯಕ್ರಮ ಜರುಗಿತು.
ಈ ತೊಟ್ಟಿಲೋತ್ಸವ ಕಾರ್ಯಕ್ರಮಕ್ಕೆ ಸಂಸದ ಶಿವಕುಮಾರ ಉದಾಸಿ ಅವರು ತೊಟ್ಟಿಲು ತೂಗುವ ಮೂಲಕ ತೊಟ್ಟಿಲೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀಮಠದ ಕಿರಿಯ ಸ್ವಾಮಿಜಿಗಳಾದ ಅಮೋಘ ಸಿದ್ದೇಶ್ವರನಂದ ಸ್ವಾಮೀಜಿ, ಶಾಸಕರಾದ ನೆಹರೂ ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಲ್ಲೇಶಪ್ಪ ಹೊರಪೇಟೆ, ಶ್ರೀಮಠದ ಆಡಳಿತಾಧಿಕಾರಿ ಎಸ್. ಎಫ್, ಎನ್ ಗಾಜೀಗೌಡ್ರು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾದ ಮಾರುತಿ ಹರಿಹರ, ಶ್ರೀ ಹಕ್ಕಬುಕ್ಕ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಬೀರಪ್ಪ ಎಂ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
