ಬುಕ್ಕಾಪಟ್ಟಣದಲ್ಲಿ ಶಾಸಕರಿಂದ ಕಂದಾಯ ಅದಾಲತ್ ಕಾರ್ಯಕ್ರಮ

ಬುಕ್ಕಾಪಟ್ಟಣ

   ತಾಲ್ಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ ಕಂದಾಯ ಇಲಾಖೆಯ ವತಿಯಿಂದ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಸತತ 4 ರಿಂದ 5 ಗಂಟೆಗಳ ಕಾಲ ಕಂದಾಯ ಇಲಾಖೆಯ ಸಮಗ್ರ ಕಡತಗಳನ್ನು ಹಾಗೂ ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸುವಲ್ಲಿ ಚಿ.ನಾ.ಹಳ್ಳಿ ಶಾಸಕ ಜೆ.ಸಿ.ಮಾಧುಸ್ವಾಮಿ ಯಶಸ್ವಿಯಾದರು.

    ಪಹಣಿ ತಿದ್ದುಪಡಿ, ಖಾತಾ ಬದಲಾವಣೆ, ಭೂಮಿ ಅಳತೆ, ಸಾಮಾಜಿಕ ಭದ್ರತಾ ಯೋಜನೆಗಳಲ್ಲಿನ ಮಾಸಿಕ ಪಿಂಚಣಿ ಯೋಜನೆ ಸೇರಿದಂತೆ ಹತ್ತು ಹಲವು ಯೋಜನೆಗಳ ಲಾಬ ಪಡೆಯಲಾಗದೆ ಕಂದಾಯ ಇಲಾಖಾ ಕಛೇರಿಗೆ ಅಲೆದು ಬಸವಳಿದಿದ್ದ ಅರ್ಹ ಫಲಾನುಭವಿಗಳು ಸ್ಥಳದಲ್ಲಿಯೇ ತಮ್ಮ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಂಡದ್ದು ಕಂದಾಯ ಅದಾಲತ್ ಕಾರ್ಯಕ್ರಮಕ್ಕೆ ಮೆರಗು ನಿಡಿದಂತಿತ್ತು.

    ಆರಂಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಜೆ.ಸಿ.ಮಾಧುಸ್ವಾಮಿ ಇಂದಿಗೂ ಅದೆಷ್ಟೋ ಗ್ರಾಮೀಣ ಭಾಗದ ಫಲಾನುಭವಿಗಳು ಕಂದಾಯ ಇಲಾಖೆಯ ಸೌಲಭ್ಯ ಪಡೆಯಲು ಹರ ಸಾಹಸಪಡುವಂತಾಗಿದೆ. ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಅವರ ಸಮಸ್ಯೆ ಪರಿಹರಿಸಲು ಕಂದಾಯ ಅದಾಲತ್ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು.

     ಮಧುಗಿರಿ ಉಪ ವಿಭಾಗಾಧಿಕಾರಿ ಚಂದ್ರಶೇಖರಯ್ಯ ಮಾತನಾಡಿ ಮುಂದಿನ 15 ದಿನದೊಳಗೆ ಪಿಂಚಣಿ ಪಾವತಿಯಲ್ಲಿನ ಲೋಪದೋಷಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಇದೇ ಕಾರ್ಯಕ್ರಮದಲ್ಲಿ 235 ಮಂದಿ ಫಲಾನುಭವಿಗಳಿಗೆ ಮಾಸಿಕ ಪಿಂಚಣಿ ಮಂಜೂರಾತಿ ಪತ್ರಗಳನ್ನು ನೀಡಲಾಯಿತು.ತಹಶೀಲ್ದಾರ್ ನಾಹಿದಾ ಜಮ್ ಜಮ್, ಜಿ.ಪಂ. ಸದಸ್ಯ ಜಯಪ್ರಕಾಶ್, ಜಿ.ಪಂ. ಮಾಜಿ ಸದಸ್ಯ ರಾಮಚಂದ್ರಪ್ಪ, ತಾ.ಪಂ. ಸದಸ್ಯೆ ಶ್ರೀಮತಿ ಮಂಜುಳಾ ಬಾಯಿ ಸೇರಿದಂತೆ ಕಂದಾಯ ಇಲಾಖೆಯ ಅನೇಕ ಅಧಿಕಾರಿಗಳು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link