ಹುಳಿಯಾರು:
ಚಿಕ್ಕನಾಯಕನಹಳ್ಳಿ ತಾಲ್ಲೂಕು ಆಡಳಿತದಿಂದ ಇದೇ 4 ರಂದು ಹುಳಿಯಾರು ಪಟ್ಟಣದ ಪರಿವೀಕ್ಷಣಾ ಮಂದಿರದ ಆವರಣದಲ್ಲಿ ಕಂದಾಯ ಹಾಗೂ ಪಿಂಚಣಿ ಅದಾಲತ್ ಮತ್ತು ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಪಹಣಿ ತಿದ್ದುಪಡಿ, ಪೌತಿ ಖಾತೆ, ವಯೋವೃದ್ಧರಿಗೆ, ವಿಧೆವೆಯರಿಗೆ ಮತ್ತು ಅಂಗವಿಕಲರಿಗೆ ವೇತನ ಪತ್ರಗಳ ವಿತರಣೆ ಹಾಗೂ ಹೊಸದಾಗಿ ಅರ್ಜಿಗಳ ಸ್ವಿಕಾರ ಮಾಡಲಾಗುವುದು.
ಕಾರ್ಯಕ್ರಮದಲ್ಲಿ ಶಾಸಕ ಜೆ.ಸಿ.ಮಾಧುಸ್ವಾಮಿ, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರುವರು. ಸಾರ್ವಜನಿಕರು ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ತಹಶೀಲ್ದಾರ್ ಬಿ.ತೇಜಸ್ವಿನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








