ನಾಳೆ ಬಿ.ಎಂ.ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ವೈಭವದ ಕನ್ನಡ ರಾಜ್ಯೋತ್ಸವ

ಚಳ್ಳಕೆರೆ

       ಪ್ರತಿವರ್ಷದಂತೆ ಈ ವರ್ಷವೂ ಸಹ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಇಲ್ಲಿನ ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ತಿಳಿಸಿದ್ದಾರೆ.

       ಕಾರ್ಯಕ್ರಮದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಟಿ.ಸಿ.ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶಪ್ಪ, ನಗರ ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ದೈಹಿಕ ಶಿಕ್ಷರಾದ ಶ್ರೀನಿವಾಸ್, ಪ್ರಾಣೇಶ್, ತಿಪ್ಪೇಸ್ವಾಮಿ ಮುಂತಾದವರು ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಟಿ.ಸಿ.ಕಾಂತರಾಜು, ಸಂಜೆ ಕನ್ನಡ ಸಂಗೀತ ಸಂಜೆ ಕಾರ್ಯಕ್ರಮ ಇರುವುದರಿಂದ ಹೆಚ್ಚಿನ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ರಾಜ್ಯೋತ್ಸವದ ಬಗ್ಗೆ ಉಪನ್ಯಾಸಕವನ್ನು ಸಹಾಯಕ ಪ್ರಾಧ್ಯಾಪಕ ಡಾ.ಕೆ.ಚಿತ್ತಯ್ಯ ನೀಡಲಿದ್ದು, ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಹಾಗೂ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಅವರು ಮಾಹಿತಿ ನೀಡಿದ್ಧಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link