ಹೊಳಲ್ಕೆರೆ:
ಕನ್ನಡ ರಾಜ್ಯೋತ್ಸವ ಪ್ರತಿ ವರ್ಷ ನವಂಬರ್ ತಿಂಗಳಲ್ಲಿ ಆಚರಿಸಲಾಗುತ್ತದೆ. ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956 ನವಂಬರ್ ಒಂದರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ತಹಶೀಲ್ದಾರ್ ವೈ.ತಿಪ್ಪೇಸ್ವಾಮಿ ಮಾತನಾಡಿದರು.
ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು ಹಾಗೂ ಮಾಲೀಕರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 63ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಭೂವನೇಶ್ವರಿ ಭಾವ ಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಮಾತನಾಡಿದರು.
ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ ಎಂದರು.
ತಾ.ಪಂ. ಮಾಜಿ ಅಧ್ಯಕ್ಷ ಮೋಹನ್ ನಾಗರಾಜ್ ಮಾತನಾಡಿ ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಭೇದವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾದೊಂದಿಗೆ ಅಲಂಕರಿಸಲಾಗಿರುತ್ತದೆ. ಕನ್ನಡ ನಾಡು-ನುಡಿ ಕುರಿತ ಎಚ್ಚರ ನವಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದಿರಲಿ. ಅದು ವರ್ಷ ಪೂರ್ತಿ ಎಚ್ಚರವಾಗಿರಲಿ ಕನ್ನಡ ಕುರಿತು ಕಾಳಜಿ, ಕಳವಳ ಹೀಗೆ ನಿರಂತರವಾಗಿ ನಮ್ಮೆದೆಯೋಳಗಿದ್ದರೆ ನಮ್ಮ ನಾಡು-ನುಡಿಗೆ ದೈನೇಸಿ ಸ್ಥಿತಿ ಒದಗುವ ಸಾಧ್ಯತೆ ಖಂಡಿತ ಬರೋಲ್ಲ ಎಂದು ತಿಳಿಸಿದರು.
ಈ ಸಂದರ್ಬದಲ್ಲಿ ಮಾಜಿ ಪತ್ರಕರ್ತರ ಸಂಘದ ಅಧ್ಯಕ್ಷ ಶಿವರುದ್ರಪ್ಪ ಮಾತನಡಿದರು. ಅಧ್ಯಕ್ಷತೆ ವಹಿಸಿದ್ದ ಆಟೋ ಚಾಲಕರ ಅಧ್ಯಕ್ಷ ಪಿ.ಹೆಚ್.ಹನುಮಂತಪ್ಪ, ಕ.ರ.ವೇ ನಗರ ಘಟಕದ ಅಧ್ಯಕ್ಷ ವಿಜಯ್ ಕುಮಾರ್ ಮಾತನಾಡಿದರು.ಇದೇ ಸಂದರ್ಭದಲ್ಲಿ ಆಟೋಚಲಿಸಿ 15 ವರ್ಷದಿಂದ ಇದರಲ್ಲೆ ಜೀವನ ನಡೆಸುತ್ತಿರುವ ಆಟೋ ಚಾಲಕರಾಕ ಹಾಗೂ ಮಾಲೀಕರಾದ ಪ್ರಶಾಂತ್, ನೂರುಲ್ಲಾ, ರಫೀಕ್, ರಾಮಚಂದ್ರಪ್ಪ, ಆನಂದಪ್ಪ ಸನ್ಮಾನ ಮಾಡಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
