ಚಳ್ಳಕೆರೆ
ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಕನ್ನಡ ಭಾಷೆ ಉಸಿರಾಗಿದೆ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅಭಿಮಾನಪೂರಕವಾಗಿ ಆಚರಣೆ ಮಾಡಿಕೊಂಡು ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕನ್ನಡ ಪರ ಕಾಳಜಿಯನ್ನು ಎಲ್ಲರೂ ಮೆಚ್ಚಬೇಕೆಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಅವರು, ಶುಕ್ರವಾರ ಇಲ್ಲಿನ ವಾಲ್ಮೀಕಿ ವೃತ್ತದಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಧ್ವಜವನ್ನು ಹಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಹಿನ್ನೆಲ್ಲೆಯಲ್ಲಿ ನೂರಾರು ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು, ವಿವಿದ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮೆರವಣಿಗೆಯಲ್ಲಿ ಭಾಗವಹಿಸಿ ತಮ್ಮ ಕನ್ನಡಾಭಿಮಾನವನ್ನು ಪ್ರದರ್ಶಿಸಿದರು. ಕನ್ನಡ ನಾಡಿನಲ್ಲಿ ಕಳೆದ ಹಲವಾರು ದಶಕಗಳಿಂದ ಸರ್ಕಾರ ಕನ್ನಡವನ್ನೇ ಆಡಳಿತ ಭಾಷೆಯನ್ನಾಗಿ ಮಾಡುವ ಮೂಲಕ ಎಲ್ಲಾ ಕನ್ನಡಾಭಿಮಾನಿಗಳ ಮೆಚ್ಚುಗೆ ಪಾತ್ರವಾಗಿದೆ. ಕನ್ನಡ ಭಾಷೆಯ ಮೇಲೆ ಯಾವುದೇ ರೀತಿಯ ದಬ್ಬಾಳಿಕೆಯನ್ನು ಯಾವ ಕನ್ನಡಿಗನೂ ಸಹಿಸಲಾರ. ಕನ್ನಡ ರಾಜ್ಯೋತ್ಸವದ ದಿನದಂದು ತಾಯಿ ಭುವನೇಶ್ವರಿಯ ಭಾವಚಿತ್ರದೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ವಿಶೇಷ ಮೆರಗನ್ನು ವಿವಿಧ ಕಲಾ ತಂಡಗಳ ಮೂಲಕ ಹಮ್ಮಿಕೊಂಡಿರುವುದು ಇದು ಕಾರ್ಯಕ್ರಮಕ್ಕೆ ಹೆಚ್ಚು ಮೆರಗು ನೀಡುತ್ತದೆ ಎಂದರು.
ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ, ಮಾಜಿ ನಗರಸಭಾ ಸದಸ್ಯ ಟಿ.ಜೆ.ವೆಂಕಟೇಶ್ ಮಾತನಾಡಿ, ಪ್ರತಿವರ್ಷವೂ ನಮ್ಮ ಸಂಘಟನೆಯಿಂದ ಈ ಕಾರ್ಯಕ್ರಮವನ್ನು ವೈಭವದಿಂದ ಆಚರಣೆ ಮಾಡಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಕನ್ನಡ ಭಾಷೆಯ ಹಿತವನ್ನು ರಕ್ಷಿಸುವಲ್ಲಿ ನಮ್ಮ ಸಂಘಟನೆ ಸದಾ ಮುಂದಾಗಿರುತ್ತದೆ. ಇಂದಿನ ಈ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಹೆಚ್ಚಿನ ಜನರು ಆಗಮಿಸಿ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರಗು ತಂದಿದ್ಧಾರೆಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎನ್.ಓಬಳೇಶ್, ಡಾ.ಬಿ.ಯೋಗೇಶ್ಬಾಬು, ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರಮೇಶ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಗಿರಿಯಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಎಚ್.ಆಂಜನೇಯ, ಜಿ.ವೀರೇಶ್, ರಂಜಿತಾ, ನಗರಸಭಾ ಸದಸ್ಯರಾದ ವೈ.ಪ್ರಕಾಶ್, ಟಿ.ಮಲ್ಲಿಕಾರ್ಜುನ್, ಬಿ.ಟಿ.ರಮೇಶ್ಗೌಡ, ವಿರೂಪಾಕ್ಷಿ, ಸತೀಶ್ಕುಮಾರ್, ವಳ್ಳಿಪ್ರಕಾಶ್, ವಿಶ್ವನಾಥ, ನಾಗರಾಜ, ಶಿವಕುಮಾರಸ್ವಾಮಿ, ಟಿ.ಜೆ.ತಿಪ್ಪೇಸ್ವಾಮಿ, ನಿಸರ್ಗಗೋವಿಂದರಾಜು, ಶ್ರೀನಿವಾಸ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರವಿಕುಮಾರ್, ಬಾಬುರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








