ಕರ್ನಾಟಕ ರಕ್ಷಣಾವೇದಿಕೆಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಿದ್ದತೆ

ಚಳ್ಳಕೆರೆ

        ಕನ್ನಡ ನಾಡುನುಡಿ ರಕ್ಷಣೆಗೆ ಕಳೆದ ಹಲವಾರು ದಶಕಗಳಿಂದ ನಿರಂತರವಾಗಿ ಮುಂಚೂಣಿ ಹೋರಾಟ ನಡೆಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಭಾಷೆಯ ಸಂಪೂರ್ಣ ಬೆಳವಣಿಗೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತಿದ್ದು, ಕನ್ನಡಿಗರಲ್ಲಿ ಹೆಚ್ಚು ಜಾಗೃತಿ ಮೂಡಿಸಲು ನ.30ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾವೇದಿಕೆ ತಾಲ್ಲೂಕು ಅಧ್ಯಕ್ಷ, ಮಾಜಿ ನಗರಸಭಾ ಸದಸ್ಯ ಟಿ.ಜೆ.ವೆಂಕಟೇಶ್(ಸ್ವಪ್ನ)ತಿಳಿಸಿದ್ಧಾರೆ.

          ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಿನ್ನೆಲ್ಲೆಯಲ್ಲಿ ಈಗಾಗಲೇ ಪೂರ್ವ ಸಿದ್ದತೆಗಳು ಅಂತಿಮ ಹಂತದಲ್ಲಿದ್ದು, ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಉಳಿವಿಗಾಗಿ ಶ್ರಮಿಸಿದ ಅಭಿನಂದಿಸಲಾಗವುದು. ನ.31ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ನಗರದ ಎಲ್ಲಾ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಲೇಖಕರು, ಸಾಹಿತಿಗಳು, ಚಿಂತಕರು ತಪ್ಪದೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ಧಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link