ಕುಣಬಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ :ಪ್ರಿಯಾಂಕ್ ಖರ್ಗೆ

ಬೆಳಗಾವಿ

      ಉತ್ತರ ಕನ್ನಡ ಜಿಲ್ಲೆಯ ದಟ್ಟ ಕಾಡುಗಳಲ್ಲಿ ವಾಸಿಸುವ ಕುಣಬಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದ ಶಿಫಾರಸ್ಸನ್ನು ತಿರಸ್ಕಾರ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

       ಮೇಲ್ಮನೆಯಲ್ಲಿಂದು ಸದಸ್ಯ ಘೋಟ್ನೇಕರ ಶ್ರೀಕಾಂತ ಲಕ್ಷ್ಮಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕುಣಬಿ ಸಮುದಾಯವನ್ನು ಪರಿಶಿಷ್ಟ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ 2017 ಅಕ್ಟೋಬರ್ 10 ರಂದು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಿದ್ದು, ಜುಲೈ 31 2018 ರಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ತಮ್ಮ ಶಿಫಾರಸಿಗೆ ಬೆಂಬಲ ನೀಡದೆ, ಹೆಚ್ಚುವರಿ ಮಾಹಿತಿಗಳನ್ನು ಒದಗಿಸುವಂತೆ ಸೂಚಿಸಿದ್ದಾರೆ ಎಂದರು.

       ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾದ ಪರಿಶೀಲನಾಂಶಗಳ ಬಗ್ಗೆ ಸಮರ್ಥನೆ ಮತ್ತು ಹೆಚ್ಚುವರಿ ವಿವರಗಳನ್ನು ನೀಡುವಂತೆ ಮೈಸೂರಿನ ರಾಜ್ಯ ಬುಡಕಟ್ಟು ಸಂಸ್ಥೆಗೆ ಮನವಿ ಮಾಡಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಸೂಕ್ತ ಕ್ರಮ ಜರುಗಿಸಲಾಗುವುದು. 3 ತಿಂಗಳ ಒಳಗೆ ಇಲಾಖೆಯಿಂದ ವರದಿ ತರಿಸಿ ಪುನಃ ಕೇಂದ್ರಕ್ಕೆ ಕಳುಹಿಸಿ ಕೊಡಲಾಗುವುದು ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap