ಬಳ್ಳಾರಿ
ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕರನ್ನು ಕರೆದೊಯ್ಯುವುದು ಅಪರಾಧವಾಗಿದೆ ಅಲ್ಲದೆ, ತಂಬಾಕು ಸೇವೆನೆಯಿಂದ ಮನುಷ್ಯನ ಆರೋಗ್ಯ ಕೆಡುತ್ತದೆ, ಆದ ಕಾರಣ ತಂಬಾಕು ರಹಿತ ಜೀವನ ಸಾಗಿಸಲು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್. ಮಲ್ಲೂರ್ ಅವರು ಕರೆ ನೀಡಿದರು.
ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ ಮತ್ತು ಎಸ್.ವಿ.ಇ. ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಎಸ್.ವಿ.ಇ. ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್‍ನಲ್ಲಿ “ಸರಕು ಸಾಗಣೆ ವಾಹನಗಳಲ್ಲಿ ಕಾರ್ಮಿಕರನ್ನು ಕರೆದೊಯ್ಯುವುದನ್ನು ತಡೆಗಟ್ಟುವ ಬಗ್ಗೆ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆ ಮತ್ತು ತಂಬಾಕು ನಿಯಂತ್ರಣದ ಬಗ್ಗೆ” ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಮೊಹಮ್ಮದ್ ಜಹೀರ್ ಬಾಷಾ ಅವರು ಮಾತನಾಡಿ, ಬಾಲಕಾರ್ಮಿಕರನ್ನು ನೇಮಕ ಮಾಡಿಕೊಂಡ ಮಾಲೀಕರಿಗೆ ಕಾನೂನಿನಲ್ಲಿ 20 ಸಾವಿರ ರೂ.ಗಳಿಂದ 50 ಸಾವಿರ ರೂ.ಗಳವರೆಗೆ ದಂಡ ಅಥವಾ 06 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಇದೆ ಎಂದು ಹೇಳಿದರು.
ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಕ್ಷೇತ್ರಾಧಿಕಾರಿ ಈಶ್ವರಯ್ಯ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.ಈ ಸಂದರ್ಭದಲ್ಲಿ ಎಸ್.ವಿ.ಇ. ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್‍ನ ತಾಂತ್ರಿಕ ನಿರ್ದೇಶಕ ಡಾ.ಸಿ.ಶಿವಲಿಂಗಮ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ. ಮೌನೇಶ್, ಕಾರ್ಮಿಕ ನಿರೀಕ್ಷಕರಾದ ಎಂ.ರವಿದಾಸ್, ಸಿ.ಎನ್. ರಾಜೇಶ್, ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ ಜಿಲ್ಲಾ ಸಲಹೆಗಾರ ದುರುಗೇಶ್ ಮಾಚನೂರ್, ಎಸ್.ವಿ.ಇ. ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್‍ನ ವ್ಯವಸ್ಥಾಪಕ ಬಾಲಾಜಿ, ಭೋಜರಾಜು ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.