ಬೆಂಗಳೂರು
ಹೋಟೆಲ್ ಉದ್ಯಮಿ ಹಾಗು ವರನಟ ಡಾ. ರಾಜ್ ಕುಮಾರ್ ಕುಟುಂಬಕ್ಕೆ ಹತ್ತಿರದವರಾಗಿದ್ದ ಕಪಾಲಿ ಮೋಹನ್ ತಮ್ಮದೇ ಪಡೆತನದ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದ ಸಮೀಪ ಸುಪ್ರೀಂ ಹೋಟೆಲ್ ನಲ್ಲಿ ಉದ್ಯಮಿ ಮೋಹನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಸುಪ್ರೀಂ ಹೋಟೆಲ್ ಕಪಾಲಿ ಮೋಹನ್ ಅವರ ಒಡೆತನದ ಹೋಟೆಲ್ ಆಗಿದೆ.ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗಿಲ್ಲ. ಸಧ್ಯ ಸ್ಥಳಕ್ಕೆ ಗಂಗಮ್ಮನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ