ಕಾರ್ಮಿಕರ ನಿರಂತರ ಪರಿಶ್ರಮದಿಂದ ದೇಶದ ಅಭಿವೃದ್ಧಿ ಸಾಧ್ಯ : ಶಫೀವುಲ್ಲಾ

ಚಳ್ಳಕೆರೆ

     ಕಾರ್ಮಿಕರ ಪರಿಶ್ರಮದಿಂದಲೇ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಯಾವುದೇ ರೀತಿಯ ಅಭಿವೃದ್ಧಿಯನ್ನು ನಾವು ಕಾಣಬೇಕಾದಲ್ಲಿ ಅದು ಕಾರ್ಮಿಕರು ನಿರ್ವಹಿಸುವ ಕಾರ್ಯದಲ್ಲಿರುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಕಾರ್ಮಿಕ ಸಮೂಹಕ್ಕೆ ಹೆಚ್ಚಿನ ಮೌಲ್ಯವನ್ನು ನೀಡಲಾಗುತ್ತಿದೆ ಎಂದು ಕಾರ್ಮಿಕ ನಿರೀಕ್ಷಕ ಮಹಮ್ಮದ್ ಶಫೀವುಲ್ಲಾ ತಿಳಿಸಿದರು.

     ಅವರು, ಬುಧವಾರ ಇಲ್ಲಿನ ಚಿತ್ರದುರ್ಗ ರಸ್ತೆಯಲ್ಲಿರುವ ಜನಪ್ರಿಯಾ ಸೇವಾ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ ಹಲವಾರು ದಶಕಗಳಿಂದ ಕಾರ್ಮಿಕ ಸಮೂಹಕ್ಕೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾಯೋನ್ಮುಖವಾಗಿದೆ.

     ಇತ್ತೀಚಿನ ದಿನಗಳಲ್ಲಿ ಕಾರ್ಮಿಕ ಸಂಘಟನೆಯ ವಿವಿಧ ಕಾರ್ಯಗಳನ್ನು ನಿರ್ವಹಿಸುವ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕಾರ್ಮಿಕರಿಗೆ ಪತ್ಯೇಕವಾಗಿ ವಿಮಾ ಸೌಲಭ್ಯ, ಕಲ್ಯಾಣ ನಿಧಿ, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯನ್ನು ಜಾರಿಗೊಳಿಸಲಾಗಿದೆ.

     18 ರಿಂದ 60 ವರ್ಷದ ವಯೋಮಿತಿಯ ವರೆಗೂ ಇದು ಅನ್ವಯಿಸುತ್ತದೆ. 11 ವರ್ಷಗಳ ಅಸಂಘಟಿತ ಕಾರ್ಮಿಕರೂ ಸಹ ಈ ಯೋಜನೆಯ ಸೌಲಭ್ಯಯವನ್ನು ಪಡೆಯಬಹುದಾಗಿದೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ ಕಾರ್ಮಿಕರು ಆಕಸ್ಮಿಕವಾಗಿ ಮೃತಪಟ್ಟಲ್ಲಿ ಅವರಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಆರ್ಥಿಕ ನೆರವು ಒದಗಿಸಲಾಗುವುದು.

     ಆದರೆ, ಪ್ರತಿಯೊಬ್ಬ ಕಾರ್ಮಿಕನು ಸಹ ಇಲಾಖೆಯನ್ನು ತನ್ನ ಹೆಸರನ್ನು ನೊಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ಪಡೆದಿರಬೇಕು ಎಂದರು. ಜನಸೇವಾ ಕೇಂದ್ರದ ನಿರ್ದೇಶಕಿ ಸಿಲಿಯಾ ಮಾತನಾಡಿ, ಕಾರ್ಮಿಕ ಇಲಾಖೆ ಅಧಿಕಾರಿಗಳು ಇಲಾಖೆಯ ಸೌಲಭ್ಯದ ಬಗ್ಗೆ ಉತ್ತಮ ಮಾಹಿತಿ ನೀಡಿದ್ದಾರೆ. ಬಹುತೇಕ ಕಾರ್ಮಿಕರು ತಮ್ಮದೇಯಾದ ಕೆಲಸ ಕಾರ್ಯಗಳಲ್ಲಿ ನಿರತರಾಗಿದ್ದು, ಸೌಲಭ್ಯಗಳ ಬಗ್ಗೆ ಹೆಚ್ಚು ತಿಳಿದುಕೊಂಡಿಲ್ಲ.

       ಪ್ರತಿಯೊಬ್ಬ ಕಾರ್ಮಿಕನೂ ಸಹ ಇಲಾಖೆಯ ಸೌಲಭ್ಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಕಾರ್ಯನಿರ್ವಹಿಸಬೇಕು. ಕಾರಣ, ಕಾರ್ಮಿಕರು ಸದಾಕಾಲ ಯಾವುದೇ ರೀತಿಯ ವೈಯಕ್ತಿಕ ಬದುಕನ್ನು ಲೆಕ್ಕಿಸದೆ ತಮ್ಮ ಕಾರ್ಯದಲ್ಲಿ ನಿರತರಾಗುತ್ತಾರೆ. ವಿಶೇಷವಾಗಿ ಅಸಂಘಟಿತ ಕಾರ್ಮಿಕ ವಲಯಗಳಲ್ಲಿ ಸೇವಾ ಭದ್ರತೆಯೂ ಸೇರಿದಂತೆ ಯಾವುದೇ ರೀತಿಯ ಸೌಲಭ್ಯಗಳಿಲ್ಲ. ಆದ್ದರಿಂದ ಕಾರ್ಮಿಕ ಇಲಾಖೆ ಎಲ್ಲಾ ಕಾರ್ಮಿಕರನ್ನು ಒಂದೇ ಎಂದು ಭಾವಿಸಿ ಸೌಲಭ್ಯ ನೀಡುವಂತೆ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಚಾಂದಿನಿ, ಕಟ್ಟಡ ಕಾರ್ಮಿಕರ ಸಂಘದ ಮುಖಂಡ ವೀರೇಶ್ ಮುಂತಾದವರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link