ಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆ…!

ಬೆಂಗಳೂರು

   ಮಾನ್ಯ ಮುಖ್ಯಮಂತ್ರಿಗಳ ಹುಟ್ಟುಹಬ್ಬದ ದಿನ ಕೇಂದ್ರ ಸರ್ಕಾರ ಮಹದಾಯಿ ಯೋಜನೆಗೆ ಹಸಿರು ನಿಶಾನೆ ತೋರಿದ ಬೆನ್ನಲೆ ಈಗ  ಕಾಮಗಾರಿಯನ್ನು ಆರಂಭಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ .ಗೋವಾ ಸರ್ಕಾರ ಮಹದಾಯಿ ಯೋಜನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಈ ಆದೇಶ ನೀಡಿದೆ . 2014ರ ಮಧ್ಯಂತರ ತೀರ್ಪು ಪಾಲಿಸುವಂತೆ ಸೂಚನೆ ನೀಡಿದ ನ್ಯಾಯಾಲಯ ಗೋವಾ ಅರ್ಜಿಯನ್ನು ಇತ್ಯರ್ಥಗೊಳಿಸಿತು.

     ಮಹದಾಯಿ ನ್ಯಾಯಾಧೀಕರಣ 2014ರಲ್ಲಿ ನೀಡಿದ್ದ ಆದೇಶವನ್ನು ಪಾಲಿಸಬೇಕು. ಯೋಜನೆಯ ಡಿಪಿಆರ್ ಸಲ್ಲಿಕೆ ಮಾಡಿದ ಬಳಿಕ ಕಾಮಗಾರಿ ಆರಂಭಿಸಬಹುದು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಕೇಂದ್ರ ಸರ್ಕಾರದ ಏಜೆನ್ಸಿಗಳ ಅನುಮತಿ ಪಡೆದುಕೊಂಡು ಕರ್ನಾಟಕ ಯೋಜನೆಯ ಕಾಮಗಾರಿಯನ್ನು ಆರಂಭಿಸಬೇಕು ಎಂದು ನ್ಯಾಯಾಲಯ ಹೇಳಿದೆ.ಫೆಬ್ರವರಿ 20ರಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹದಾಯಿ ಯೋಜನೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು ಎಂದು ಸೂಚನೆ ನೀಡಿತ್ತು. ಫೆಬ್ರವರಿ 27ರಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

      ಸರ್ಕಾರ ಅಧಿಸೂಚನೆ ಹೊರಡಿಸಿದರೂ ಈಗ ಕರ್ನಾಟಕ ಯೋಜನೆಯ ಕಾಮಗಾರಿಯನ್ನು ಆರಂಭಿಸುವಂತಿಲ್ಲ. ಯೋಜನೆಯ ಡಿಪಿಆರ್ ಸಿದ್ಧವಾಗಬೇಕು. ಕೇಂದ್ರದ ವಿವಿಧ ಏಜೆನ್ಸಿಗಳ ಅನುಮತಿಯನ್ನು ಪಡೆಯಬೇಕು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ