ಜಿಎಸ್‌ಟಿ ಸಂಗ್ರಹ : ರಾಜ್ಯಕ್ಕೆ 2ನೇ ಸ್ಥಾನ ಸಿಕ್ಕರೂ ಸಿಗದ ಬರ ಪರಿಹಾರ

ಬೆಂಗಳೂರು

    ಡಿಸೆಂಬರ್ ತಿಂಗಳ ಜಿಎಸ್‌ಟಿ ಸಂಗ್ರಹ ಪಟ್ಟಿ ಪ್ರಕಟವಾಗಿದ್ದು.ಇದರಲ್ಲಿ ಮಹಾರಾಷ್ಟ್ರ ಜಿ ಎಸ್ ಟಿ ಸಂಗ್ರಹದಲ್ಲಿ ಪ್ರಥಮ ಸ್ಥಾನದಲ್ಲಿದೆ ನಂತರದ ಸ್ಥಾನ ಕರ್ನಾಟಕಕ್ಕೆ ಸಿಕ್ಕಿದೆ. ಆದರೆ ರಾಜ್ಯ ಸರ್ಕಾರಕ್ಕೆ ಜಿಎಸ್‌ಟಿ ಪರಿಹಾರವಾಗಿ ಕೇಂದ್ರದಿಂದ ಬರಬೇಕಾದ ಹಣ ಇನ್ನೂ ಬಿಡುಗಡೆಯಾಗಿಲ್ಲ.

    ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಕರ್ನಾಟಕಕ್ಕೆ ಸಿಗಬೇಕಿದ್ದ ಜಿಎಸ್‌ಟಿ ಪರಿಹಾರದ ಸುಮಾರು 3,300 ಕೋಟಿ ರೂ. ಹಣವು ಡಿ.31ರಂದು ಬಿಡುಗಡೆಯಾಗಬೇಕಿತ್ತು. ಇದು ಪುನಃ ವಿಳಂಬವಾಗಿದೆ. ಇದರಿಂದ ರಾಜ್ಯದ ಹಣಕಾಸು ಮತ್ತು ಆಯವ್ಯಯದ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದೆ.

   ಡಿಸೆಂಬರ್-ಜನವರಿಯ ಜಿಎಸ್‌ಟಿ ಪರಿಹಾರದ ಹಣವು ಈ ವರ್ಷದ ಮಾರ್ಚ್ ಅಂತ್ಯದೊಳಗೆ ರಾಜ್ಯಕ್ಕೆ ಲಭ್ಯವಾಗಬೇಕಿದೆ. ಆದರೆ ಸತತ ವಿಳಂಬದಿಂದಾಗಿ ಇದು ಕೂಡ ಮತ್ತಷ್ಟು ತಡವಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಶೋಚನೀಯವಾಗುವ ಅಪಾಯ ಎದುರಾಗಿದೆ. ರಾಜ್ಯ ಮತ್ತು ಕೇಂದ್ರದ ನಡುವಿನ ಸಂವಹನದ ಕೊರತೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap