ಕಾಯಕ ಶರಣರ ಜಯಂತಿ ಆಚರಣೆ

ಬಳ್ಳಾರಿ

       ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ್ ಕಕ್ಕಯ್ಯ, ಉರಿಲಿಂಗ ಪೆದ್ದಿ, ಸಮಗಾರ ಹರಳಯ್ಯ ಅವರ ಜಯಂತಿಯನ್ನು ಗುರುವಾರ ಸರಳವಾಗಿ ಆಚರಿಸಲಾಯಿತು.ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರ ಹಿನ್ನೆಲೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಪುಷ್ಪನಮನ ಸಲ್ಲಿಸಿದರು. ಮಹನೀಯರ ಭಾವಚಿತ್ರಕ್ಕೆ ಪೂಜೆ ಹಾಗೂ ಅರ್ಚನೆ ಮಾಡಲಾಯಿತು.

       ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯುಕ ನಿರ್ದೇಶಕ ಬಿ.ನಾಗರಾಜ್, ಸಹಾಯಕ ಆಯುಕ್ತ ರಮೇಶ್ ಕೋನರೆಡ್ಡಿ, ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ವಿಶ್ವಜೀತ್ ಮೆಹತಾ, ಸಮಾಜ ಕಲ್ಯಾಣ ಅಧಿಕಾರಿ ರಾಜಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಹಾಗೂ ವಿವಿಧ ಸಮುದಾಯದ ಮುಖಂಡರು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ