ಬೆಂಗಳೂರು
ನಗರದಲ್ಲಿ ಅಪರಾಧ ಹಿನ್ನೆಲೆ ಹೊಂದಿರುವವರ ಪಟ್ಟಿ(ಎಂಒಬಿ)ಯಲ್ಲಿರುವರ ಮೇಲೆ ಹದ್ದಿನ ಕಣ್ಣಿಡುವಂತೆ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಡಿಸಿಪಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದಲ್ಲಿ ನಡೆದ ಸರಣಿ ಸರಗಳ್ಳತನ,ಪುಡಿ ರೌಡಿಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಅಲೋಕ್ ಕುಮಾರ್ ನಗರದ ಕಾನೂನು ಸುವ್ಯವಸ್ಥೆ ವಿಭಾಗದ 8 ಮಂದಿ ಡಿಸಿಪಿಗಳಿಗೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಹಳೆ ಆರೋಪಿಗಳ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.
ಆಯುಕ್ತರ ಸೂಚನೆ ಬೆನ್ನಲ್ಲೇ ನಗರದ ಕಾನೂನು ಸುವ್ಯವಸ್ಥೆ ವಿಭಾಗದ 8 ಮಂದಿ ಡಿಸಿಪಿಗಳು ಎಂಒಬಿಗಳ ಮನೆ ಮೇಲೆ ದಾಳಿ ಮಾಡಿ ಹಲವರನ್ನು ಒಂದೆಡೆ ಪೆರೇಡ್ ಮಾಡಿಸಿ ಅಪರಾಧ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಿದ್ದಾರೆ.
ತಮ್ಮ ವ್ಯಾಪ್ತಿಯಲ್ಲಿರುವ ಎಂಒಬಿಗಳನ್ನು ಪಟ್ಟಿ ಮಾಡಿ ಎಲ್ಲರ ಮನೆ ಮೆಲೂ ದಾಳಿ ನಡೆಸಿದ್ದು,ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಎಂಒಬಿಗಳ ಪ್ರತ್ಯೇಕ ಪಟ್ಟಿ ತಯಾರಿಸಿದ್ದಾರೆ. ಎಂಒಬಿಗಳ ಪಟ್ಟಿಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇವರ ಚಲನವಲನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅಲ್ಲದೆ, ನಗರದಲ್ಲಿ ಎಲ್ಲೇ ಸರಗಳ್ಳತನ ಇನ್ನಿತರ ಅಪರಾಧ ಕೃತ್ಯಗಳು ನಡೆಯಂತೆ ಎಚ್ಚರಿಕೆ ವಹಿಸಿದ್ದು ಅಪರಾಧ ಕೃತ್ಯ ನಡೆದರೂ ಶೀಘ್ರ ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
