ಬೆಂಗಳೂರು
ಮಾದಕ ವಸ್ತು ಸಮಾಜಕ್ಕೆ ಮಾರಕವಾಗಿದ್ದರಿಂದ ರಾಜ್ಯದಲ್ಲಿ ಮಾದಕ ವಸ್ತು ಜಾಲಕ್ಕೆ ಕಡಿವಾಣ ಹಾಕಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಬುಧವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಿಸಿಬಿ ಘಟಕದಲ್ಲಿ ಸ್ವಾಧೀನಪಡಿಸಿಕೊಂಡಿರುವ ವಸ್ತುಗಳನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.ಮಾದಕ ವಸ್ತುಗಳ ಮಾರಾಟ ನಿಷೇಧಿಸಲು ಈಗಾಗಲೇ ರಾಜ್ಯದ ಪ್ರಮುಖ ನಗರಗಳಲ್ಲಿ ಕಣ್ಗಾವಲು ಇಡಲಾಗಿದೆ ಎಂದರು.
ಪ್ರಸ್ತುತ ಜೂನ್ ತಿಂಗಳ ಅಂತ್ಯಕ್ಕೆ 533 ದೂರು ದಾಖಲಾಗಿದ್ದು, 14 ವಿದೇಶಿಯರು ಸೇರಿ 799 ಆರೋಪಿಗಳನ್ನು ಬಂಧಿಸಲಾಗಿದೆ. 2019 ನೇ ಸಾಲಿನಲ್ಲಿ 768 ಪ್ರಕರಣಗಳನ್ನು ದಾಖಲಿಸಿ 1260 ಆರೋಪಿಗಳನ್ನು ಬಂಧಿಸಿದ್ದಾರೆ ಎಂದರು.ನಗರದಲ್ಲಿ 1.25 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಕೇರಳ ಮೂಲದ ನಾಲ್ವರು ಡ್ರಗ್ಸ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸದ್ಯ ಕಿಂಗ್ ಪಿನ್ ಧೀರಜ್ ಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ