ಚಿತ್ರದುರ್ಗ
ಜಿಲ್ಲೆಯಲ್ಲಿ ಯಾರು ಪ್ರಾಮಾಣಿಕವಾಗಿ ಕೆಲಸ ಮಾಡಿರುತ್ತಾರೊ ಅಂತವರಿಗೆ ಜನತೆ ಮತ ನೀಡುತ್ತಾರೆ. ಎಂದು ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ .ಚಂದ್ರಪ್ಪ ಹೇಳಿದರು.
ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯಲ್ಲಿ ನಡೆದ ಚಿತ್ರದುರ್ಗ ಲೋಕಸಭಾ ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣಾ ಪ್ರಚಾರದಲ್ಲಿ ಮಾತನಾಡಿ ಮಾಡಿದಷ್ಟು ನೀಡು ಬಿಕ್ಷೇ ಎನ್ನುವ ಶ್ರೀ ಗುರು ತಿಪ್ಪೇರುದ್ರ ಸ್ವಾಮಿ ವಾಕ್ಯದಂತೆ ನಾನು ಸಂಸದನಾದ ಮೇಲೆ ಈ ಜಿಲ್ಲೆಯಲ್ಲಿ ಹೆಚ್ಚಿನದಾಗಿ ಕುಡಿಯುವನೀರಿಗೆ ಅನುದಾನ ನೀಡಿದ್ದೇನೆ.ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ.ಈ ಕಾರಣದಿಂದಾಗಿ ಜನತೆ ಈ ಬಾರಿಯು ಕೈಹಿಡಿಯುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಬರಿ ಸುಳ್ಳು ಭರವಸೆಗಳನ್ನು ನೀಡುತ್ತು ಬಂದಿದೆ.ಸೈನಿಕರು ಹಾಗೂ ವಿಜ್ಞಾನಿಗಳು ಮಾಡಿದ ಸಾಧನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಡಿದ್ದಾರೆ ಎನ್ನುವ ರೀತಿಯಾಗಿ ಬಿಂಬಿಸಿಕೊಂಡಿದ್ದಾರೆ.ಈ ಚುನಾವಣೆಯಲ್ಲಿ ಜನತೆ ಸರಿಯಾದ ಪಾಠ ಕಳಿಸುತ್ತಾರೆ. ಎಂದು ಚಂದ್ರಪ್ಪ ಕೇಂದ್ರ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದರು.
ಈ ಸಂದರ್ಭದಲ್ಲಿ ಶಾಸಕರು ಹಾಗೂ ಹಟ್ಟಿ ಚಿನ್ನದಗಣಿ ನಿಗಮದ ಅಧ್ಯಕ್ಷರು ಶಾಸಕ.ಟಿ ರಘುಮೂರ್ತಿ ,ಮಾಜಿ ಶಾಸಕ ಡಿ. ಸುಧಾಕಾರ್ ಹಿರಿಯೂರು . ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ಮಂಜುನಾಥ್,. ಜೆಡಿಎಸ್ ಜಿಲ್ಲಾಧ್ಯಕ್ಷ ಯಶೋಧರ ಜಿಲ್ಲಾ ಪಂಚಾಯತಿ ಅಧ್ಯಕ್ಷರು ವಿಶಾಲಾಕ್ಷಿ ,ಹೊಳಲ್ಕೆರೆ ಮಾಜಿ ಶಾಸಕರು ಉಮಾಪತಿ , ಚಿತ್ರದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಫಾತರಾಜನ್ ಮತ್ತು ಮುಖಂಡರು ಪಾಲ್ಗೊಂಡಿದ್ದರು.