ಕನ್ನಡ ನಾಡಿಗೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ

ತುಮಕೂರು

     ಕನ್ನಡ ನಾಡಿಗೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ. ಗ್ರಾಮೀಣ ಪ್ರದೇಶದ ಜನರಿಗಾಗಿ ಕೆರೆ-ಕಟ್ಟೆಗಳನ್ನು ನಿರ್ಮಿಸಿ ನಾಡಿನ ಸಮಸ್ತ ಜನರ ಮನ ಗೆದ್ದಿದ್ದರು ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದರು.

     ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗ ಸಮಾಜದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ನೆರವೇರಿಸಿ ನಂತರ ಅವರು ಮಾತನಾಡಿದರು.

     ನಾಡಪ್ರಭು ಕೆಂಪೇಗೌಡರು 16 ಶತಮಾನದಲ್ಲಿಯೇ ದೂರದೃಷ್ಟಿಯಿಂದ ಸುಂದರ ಬೆಂಗಳೂರು ನಗರವನ್ನು ನಿರ್ಮಿಸಿದ್ದಾರೆ. ವಿಶ್ವದಲ್ಲಿಯೇ ಪ್ರಖ್ಯಾತಿ ಪಡೆದಿರುವ ಬೆಂಗಳೂರು ನಗರ ನಿರ್ಮಾಣಕ್ಕೆ ಕಾರಣಾರಾದವರು ನಾಡಪ್ರಭು ಕೆಂಪೇಗೌಡರು ಹಿಂದಿನ ಕಾಲದಲ್ಲಿಯೇ ಒಂದು ನಗರ ಹೇಗಿರಬೇಕೆಂಬ ಕಲ್ಪನೆಯನ್ನು ಹೊಂದಿದ್ದವರು ಎಂದು ಬಣ್ಣಿಸಿದರು.

    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಆಪಿನಕಟ್ಟೆ, ಬೆಳ್ಳಿ ಲೋಕೇಶ್ ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು, ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link