ಕೆಂಪೇಗೌಡ ಜಯಂತಿ ಅರ್ಥಪೂರ್ಣ ಆಚರಣೆ

ಚಿತ್ರದುರ್ಗ.

    ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಜೂ. 27 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರು ಹೇಳಿದರು.

      ಕೆಂಪೇಗೌಡರ ಜಯಂತಿ ಆಚರಣೆ ಕುರಿತು ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಸರ್ಕಾರದ ನಿರ್ದೇಶನದಂತೆ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಜೂ. 27 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಅಂದು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ನಗರಸಭೆ ಅಲ್ಲದೆ, ವಿವಿಧ ಸಮಾಜದ ಸಹಯೋಗದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಸಲಾಗುವುದು.

      ಕಾರ್ಯಕ್ರಮದ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಸಮಾರಂಭಕ್ಕೆ ಎಲ್ಲ ಅಧಿಕಾರಿ, ಸಿಬ್ಬಂದಿಗಳು, ಗಣ್ಯರು, ವಿವಿಧ ಸಮಾಜದ ಮುಖಂಡರುಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಸಭೆಯಲ್ಲಿ ಉಪವಿಭಾಗಾಧಿಕಾರಿ ವಿಜಯ್‍ಕುಮಾರ್, ನಗರಸಭೆ ಪೌರಾಯುಕ್ತ ಚಂದ್ರಪ್ಪ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap