ಚಳ್ಳಕೆರೆ
ಕಳೆದ ಹಲವಾರು ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಎಲ್ಲಾ ಸರ್ಕಾರಗಳು ಕಾರ್ಮಿಕ ಸಮೂಹಕ್ಕೆ ಉಪಯೋಗವಾಗುವಂತಹ ಯಾವುದೇ ಯೋಜನೆಗಳನ್ನು ಇದುವರೆಗೂ ಜಾರಿಗೆ ತಂದಿಲ್ಲ. ಕಾರ್ಮಿಕ ಸಂಘಟನೆಗಳನ್ನು ನಿಯಂತ್ರಿಸುವ ಮೂಲಕ ಕಾರ್ಮಿಕರ ಸೌಲಭ್ಯಗಳನ್ನು ನೀಡದೆ ಅನ್ಯಾಯವೆಸಗಲಾಗುತ್ತಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಟಿ.ತಿಪ್ಪೇಸ್ವಾಮಿ ಆರೋಪಿಸಿದ್ಧಾರೆ.
ಅವರು, ಬುಧವಾರ ಇಲ್ಲಿನ ಎಪಿಎಂಸಿ ಮಾರ್ಕೆಟ್ ಯಾರ್ಡ್ನ ಶ್ರಮಿಕರ ಭವನದಲ್ಲಿ ಸಿಐಟಿಯು ನೇತೃತ್ವದ ತಾಲ್ಲೂಕು ಕಾರ್ಮಿಕ ಸಂಘಟನೆಗಳ ಒಕ್ಕೂಟದ 133ನೇ ಮೇ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿನ ಕೃಷಿ ಭವನದಿಂದ ನೂರಾರು ಕಾರ್ಮಿಕರು ಮೆರವಣಿಗೆ ಹೊರಟು ನೆಹರೂ ವೃತ್ತದ ಮೂಲಕ ಕೃಷಿ ಭವನಕ್ಕೆ ಆಗಮಿಸಿದರು. ಮೆರವಣಿಗೆಯಲ್ಲಿ ಎರಡೂ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯ ಬಗ್ಗೆ ಧಿಕ್ಕರಗಳನ್ನು ಕೂಗಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಅಧ್ಯಕ್ಷ ಕೆ.ವಿ.ವೀರಭದ್ರಪ್ಪ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಎಲ್ಲಾ ಕಾರ್ಮಿಕರು ಸಂಘಟಿತರಾಗಿ ತಮ್ಮ ಕನಿಷ್ಟ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯ ಪಡಿಸುತ್ತಲೇ ಬಂದಿದ್ಧಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಮಿಕರ ವಿರೋಧಿ ದೋರಣೆ ತಾಳಿದ್ದಾವೆ. ವಿಶೇಷವಾಗಿ ಕೇಂದ್ರ ಸರ್ಕಾರ ಗಣ್ಯ ಕೈಗಾರಿಕೋದ್ಯಮಿಗಳ ಸಾಲ ಮನ್ನಾ ಮಾಡಲು ಉತ್ಸಾಹತೋರುತ್ತಾರೆ ವಿನಃ ಕಾರ್ಮಿಕರ ರೈತರ ಸಾಲಮನ್ನಾ ಬಗ್ಗೆ ಚಕಾರವೆತ್ತುವುದಿಲ್ಲವೆಂದರು.
ಕಾರ್ಯಕ್ರಮದಲ್ಲಿ ಲೋಡಿಂಗ್, ಅನ್ಲೋಡಿಂಗ್ ಅಧ್ಯಕ್ಷ ಟಿ.ನಿಂಗಣ್ಣ, ಉಪಾಧ್ಯಕ್ಷ ಇ.ನಾಗರಾಜ, ಚಕ್ಕಡಿಗಾಡಿ ಹಮಾಲರ ಸಂಘದ ಅಧ್ಯಕ್ಷ ಗಾಡಿತಿಪ್ಪೇಸ್ವಾಮಿ, ದುಗ್ಗಾವರ ಬೋರಯ್ಯ, ಸಿ.ಮಂಜುನಾಥ, ಎಸ್.ತಿಪ್ಪೇಸ್ವಾಮಿ, ಬಿ.ಪಿ.ಬೊಮ್ಮಯ್ಯ, ಕೆ.ತಿಪ್ಪೇಸ್ವಾಮಿ, ಜಯಲಕ್ಷ್ಮಮ್ಮ, ಇಂದಿರಮ್ಮ, ಗಂಗಮ್ಮ, ಈರಮ್ಮ, ಸರ್ವಮಂಗಳಮ್ಮ ಮುಂತಾದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ







