ಹೊಸದುರ್ಗ:
ತಾಲ್ಲೂಕಿನ ಕೆರೆಗಳ ಅಭಿವೃದ್ದಿಗಾಗಿ ಈಚೇಗೆ ಪಟ್ಟಣದ ಕುಂಚಿಟಿಗ ಮಠದಲ್ಲಿ ಮಠಾಧೀಶರ ನೇತೃತ್ವದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದರು. ಆ ಸಭೆಯಲ್ಲಿ 4 ಕೆರೆಗಳನ್ನು ಅಭಿವೃದ್ದಿ ಪಡಿಸುವುದಾಗಿ ತಿರ್ಮಾನಿಸಿದ್ದರು. ಅದರಲ್ಲಿ ಮೊದಲು ಸಾಣೇಹಳ್ಳಿ ಕೆರೆ ಆಯ್ಕೆ ಮಾಡಿದ್ದರು.ಶನಿವಾರ ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಕೆರೆ ಹೂಳೆತ್ತಲು ಗ್ರಾಮಸ್ಥರಿಗೆ ಜಾಗೃತಿ ಮೂಡಿಸುವ ಸಭೆ ನಡೆಸಿದರು.
ಇದೇ ವೇಳೆ ಸಿರಿಗೆರೆ ಶಾಖಾ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕುಂಚಿಟಿಗ ಮಠದ ಡಾ. ಶಾಂತವೀರ ಸ್ವಾಮೀಜಿ, ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಹಡಪದ ಅಪ್ಪನ್ಣ ಗುರುಪೀಠದ ಶ್ರೀ ಅನ್ನದಾನಿ ಅಪ್ಪಣ್ಣ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮೀಜಿ ಹಾಗೂ ಶಾಸಕ ಗೂಳಿಹಟ್ಟಿ ಡಿ.ಶೇಖರ್, ಜಿ.ಪಂ.ಅಧ್ಯಕ್ಷರು, ಸದಸ್ಯರು, ಗ್ರಾಮ ಪಂ ಅಧ್ಯಕ್ಷರು, ಸದಸ್ಯರು ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
