ಕೆಟ್ಟು ನಿಂತಿರುವ ಶುದ್ದ ಕುಡಿಯುವ ನೀರಿನ ಘಟಕದ ದುರಸ್ಥಿ ಎಂದಿಗೆ?

ಮಿಡಿಗೇಶಿ

      ಗ್ರಾಮೀಣ ಪ್ರದೇಶಗಳಲ್ಲಿನ ಪ್ರತಿಯೊಬ್ಬರು ಪ್ರತಿಯೊಂದು ಗ್ರಾಮದ ಬಡವರು, ಶ್ರೀಮಂತರು, ದೀನ ದಲಿತರು, ಮೇಲ್‍ವರ್ಗ, ಕೆಳವರ್ಗದವರೆನ್ನದೆ ಸರ್ವರೂ ಶುದ್ದ ನೀರನ್ನು ಸೇವಿಸಿ ಆರೋಗ್ಯವನ್ನು ಸರಿಯಾಗಿ ಇಟ್ಟುಕೊಳ್ಳಲೆಂಬ ಸದುದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಂತರ ರೂಪಾಯಿಗಳನ್ನು ವೆಚ್ಚ ಮಾಡಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ತೆರೆದು ಕುಡಿಯುವ ನೀರನ್ನು ಒದಗಿಸುತ್ತಿರುವುದು ಶ್ಲಾಘನೀಯ.

       ಒಂದು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಸುಮಾರು ಹತ್ತು ಲಕ್ಷಕ್ಕೂ ಅತ್ಯಧಿಕ ಹಣವನ್ನು ಸರ್ಕಾರ ಖರ್ಚು ಮಾಡುತ್ತಿದೆ. ಆದರೆ ಬಹಳಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳು ಒಂದಲ್ಲ ಒಂದು ಕಾರಣದಿಂದ ಆಗಾಗ್ಗೆ ಕೆಟ್ಟು ಹೋಗುತ್ತಿರುವುದು ಸರ್ವ ಸಾಮಾನ್ಯ ಸಂಗತಿಯಾಗಿರುತ್ತದೆ.

        ಸದರಿ ಘಟಕಗಳ ದುರಸ್ಥಿ ಬಹಳ ನಿಧಾನವಾಗುತ್ತಿದ್ದು, ಜನತೆಯು ಶುದ್ಧ ನೀರಿನ ಬದಲು ಫ್ಲೋರೈಡ್ ಅಂಶ ಹೆಚ್ಚಿರುವ ನೀರನ್ನು ಕುಡಿದು ಹತ್ತು ಹಲವಾರು ಕಾಯಿಲೆಗಳಿಗೆ ತುತ್ತಾಗಿ ಆಸ್ಪತ್ರೆಗಳಿಗೆ ಅಲೆದಾಡುತ್ತಿರುವುದು ಸರ್ವೆ ಸಾಮಾನ್ಯ. ಇದಕ್ಕೆ ಉದಾಹರಣೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗ್ರಾಮ ಪಂಚಾಯಿತಿಗೆ ಸೇರಿದ ಎಸ್.ಅಪ್ಪೇನಹಳ್ಳಿಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಹತ್ತಾರು ದಿನಗಳು ಉರುಳಿವೆ.

         ಜನತೆ ಕುಡಿಯುವ ನೀಎಇಗಾಗಿ ಪರದಾಡುತಿದ್ದಾರೆ. ಗ್ರಾಮಪಂಚಾಯಿತಿ ಅಧಿಕಾರಿ ವರ್ಗ ಹಾಗೂ ಚುನಾಯಿತ ಜನ ಪ್ರತಿನಿಧಿಗಳು ಸರ್ಕಾರಿ ಇಲಾಖೆಯಿಂದಾಗಲಿ ಅಥವಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದವರಿಂದಾಗಲಿ ತುರ್ತಾಗಿ ದುರಸ್ಥಿ ಮಾಡಿಸಿ ಜನ ಸಾಮಾನ್ಯರಿಗೆ ತುರ್ತಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗಿದೆ. ಕೆಲದಿನಗಳ ಹಿಂದೆಯಷ್ಟೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಜನತೆಗೆ ಶುದ್ಧಕುಡಿಯುವ ನೀರನ್ನು ಒದಗಿಸಲು ಸಾಕಷ್ಟು ಹಣ ಲಭ್ಯವಿರುವುದಾಗಿ ತಿಳಿಸಿರುತ್ತಾರೆ. ಆದ್ದರಿಂದ ಸಂಬಂಧಿಸಿದವರು ಜನತೆಗೆ ಶೀಘ್ರವಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಿ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap