ಅಮೃತಸರ್ ರೈಲ್ವೆ ದುರಂತಕ್ಕೆ ರೈಲ್ವೆ ಇಲಾಖೆಯೇ ಹೊಣೆ:ಖರ್ಗೆ

ಬೆಂಗಳೂರು:

       ಅಮೃತಸರ್ ರೈಲ್ವೆ ದುರಂತಕ್ಕೆ ರೈಲ್ವೆ ಇಲಾಖೆಯೇ ಹೊಣೆಯಾಗಿದ್ದು, ತನಿಖಾ ತಂಡ ನಿರ್ಮಿಸಿ ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿ ದ್ದಾರೆ.

      ಕಲಬುರಗಿಯಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾದಾನ ವ್ಯಕ್ತಪಡಿಸಿದರು.ರೈಲ್ವೆ ಹಳಿ ಪಕ್ಕ ಸಾರ್ವಜನಿಕ ಕಾರ್ಯಕ್ರಮ ಮಾಡುವಾಗ ಇಲಾಖೆ ಎಚ್ಚರಿಕೆ ವಹಿಸಿಬೇಕಿತ್ತು.ಆದರೆ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಕಾರ್ಯಕ್ರಮ ಮಾಡಿದ್ದು,ರೈಲ್ವೆ ಇಲಾಖೆ ಹಾಗೂ ರೈಲ್ವೆ ಪೊಲೀಸರ ನಿರ್ಲಕ್ಷ,ಮುನ್ನೆಚ್ಚರಿಕೆ ಕ್ರಮ ವಹಿಸದೆ ಕಾರ್ಯ ಕ್ರಮಕ್ಕೆ ಅನುಮತಿ ನೀಡಿದವರು ಯಾರು? ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

      ಮುಂದೆ ಇಂತಹ ಅವಾಂತರ ಆಗದಂತೆ ಇಲಾಖೆ ಸೂಕ್ತ ಗಮನ ಹರಿಸಬೇಕು. ಯಾವೆಲ್ಲ ಕ್ರಮ ಕೈಗೊಳ್ಳಬೇಕು ಅನ್ನೊದನ್ನು ತನಿಖಾ ತಂಡ ನಿರ್ದೇಶನ ನೀಡಬೇಕು. ಮಳೆಗಾಲ, ಚಳಿಗಾಲ, ಮಂಜು ಬಿದ್ದಾಗ, ಕರ್ವಿಂಗ್ ಇದ್ದಾಗ ರೈಲು ನಿಧಾನದ ಬಗ್ಗೆ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link