ಕೆಎನ್‍ಆರ್ ಮೇಲಿನ ಅವ್ಯವಹಾರದ ಆರೋಪ ಸತ್ಯಕ್ಕೆ ದೂರವಾದುದು

ಮಧುಗಿರಿ

     ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್ ರಾಜಣ್ಣನವರು 1200 ಕೋಟಿ ಹಣವನ್ನು ದುರುಪಯೋಗ ಪಡಿಸಿದ್ದಾರೆಂಬ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಹಕಾರಿ ಮಹಾ ಮಂಡಲದ ಅಧ್ಯಕ್ಷ ಎನ್. ಗಂಗಣ್ಣ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

      ಕೆ.ಎನ್ ರಾಜಣ್ಣನವರು ಸಹಕಾರಿ ಕ್ಷೇತ್ರದಲ್ಲಿ ಹೊಸ ಆಂದೋಲನವನ್ನೇ ಸೃಷ್ಟಿಸಿದ್ದು, ರಾಜ್ಯ ಹಾಗೂ ಜಿಲ್ಲೆಯ ರೈತರುಗಳಿಗೆ ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಸಾಲವನ್ನು ವಿತರಿಸಿದ್ದಾರೆ. ಈ ಹಿಂದೆ ಅವರು ಶಾಸಕರಾಗಿದ್ದ ಟಿ.ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಬರಗಾಲದ ಸಂದರ್ಭದಲ್ಲಿ ಗೋಶಾಲೆಗಳಲ್ಲಿನ ರೈತರಿಗೆ ಉಚಿತವಾಗಿ ಅನ್ನ ದಾಸೋಹವನ್ನು ನಡೆಸಿದ್ದಾರೆ. ಸಾಲ ಪಡೆದು ಮೃತಪಟ್ಟ ರೈತ ಕುಟುಂಬಗಳಿಗೆ ಸಾಲ ಮನ್ನಾ ಮಾಡಿದ್ದಾರೆ.

     ಕೆಲವರು ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ಹಾಗೂ ರಾಜಕೀಯವಾಗಿ ರಾಜಣ್ಣನವರನ್ನು ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದು, ಪೂರ್ವಗ್ರಹ ಪೀಡಿತರಾಗಿ ಇಂತಹ ಕೆಳಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ರಾಜ್ಯ ಅಪೆಕ್ಸ್ ಬ್ಯಾಂಕ್‍ಗೆ ರಾಜಣ್ಣನವರು ಅಧ್ಯಕ್ಷರಾದ ಮೇಲೆ ಆರ್ಥಿಕ ವರ್ಷದಲ್ಲಿ 189 ಕೋಟಿಗಳಷ್ಟು ಲಾಭಾಂಶ ಬಂದು, ಸಹಕಾರಿ ಕ್ಷೇತ್ರದ ಅತ್ಯುನ್ನತ ಬ್ಯಾಂಕ್ ಆಗಿದೆ.

     ಈ ಹಿಂದಿನ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಅವಧಿಯಲ್ಲಿ ನಡೆದ ಪ್ರಕರಣವನ್ನು ರಾಜಣ್ಣನವರ ಮೇಲೆ ತರುವ ಪ್ರಯತ್ನ ಮಾಡಲಾಗುತ್ತಿರುವುದು ಸರಿಯಲ್ಲ. ಇಂತಹ ಹೇಳಿಕೆ ಮತ್ತು ಸುದ್ದಿಗಳಿಂದ ರಾಜ್ಯದ ಸಹಕಾರಿ ಕ್ಷೇತ್ರಕ್ಕೆ ಮತ್ತು ಸಹಕಾರಿಗಳಿಗೆ ಧಕ್ಕೆಯುಂಟಾಗುತ್ತದೆ ಹಾಗೂ ಅಪನಂಬಿಕೆ ಉಂಟಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link